16 ಅನರ್ಹ ಶಾಸಕರನ್ನು ತನ್ನ ಬಳಿ ಸೆಳೆದುಕೊಂಡ ಬಿಜೆಪಿ

3:00 PM, Thursday, November 14th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Shasakaru

ಬೆಂಗಳೂರು : ಕಾಂಗ್ರೆಸ್- ಜೆಡಿಎಸ್ ನ ಹದಿನಾರು ಅನರ್ಹ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕದ ಅನರ್ಹ ಶಾಸಕರಾದ ಮಹೇಶ್ ಕುಮಟಹಳ್ಳಿ, ರಮೇಶ್ ಜಾರಕಿಹೊಳಿ, ಹೆಚ್.ವಿಶ್ವನಾಥ್, ಶಂಕರ್, ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ನಾರಾಯಣ ಗೌಡ, ಎಚ್.ಟಿ.ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜು, ಮುನಿರತ್ನ, ಎಂಟಿವಿ ನಾಗರಾಜ್,ಡಾ.ಸುಧಾಕರ್, ಶ್ರೀಮಂತ್ ಪಾಟೀಲ್, ಬಿ.ಸಿ. ಪಾಟೀಲ್ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಸರಿ ಶಾಲು ಹೊದ್ದು, ಬಿಜೆಪಿ ಬಾವುಟ ಹಿಡಿಯುವ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡರು.

Shasakaru

ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅನರ್ಹ ಶಾಸಕರನ್ನು ಬಿಜೆಪಿಗೆ ಸ್ವಾಗತಿಸಿದರು.

ಹದಿನೇಳು ಅನರ್ಹ ಶಾಸಕರ ಪೈಕಿ ರೋಷನ್ ಬೇಗ್ ಗೆ ಬಿಜೆಪಿಗೆ ಸೇರ್ಪಡೆಯಾಗಲು ಸಾಧ್ಯವಾಗಿಲ್ಲ. ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ರೋಷನ್ ಬೇಗ್ ಸೇರ್ಪಡೆಗೆ ಸಂಬಂಧಿಸಿ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English