ಬಂಟ್ವಾಳ : ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು, ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಸೌಹಾರ್ಧ ಇದರ ಉದ್ಘಾಟನಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರು ನೆರವೇರಿಸಿದರು.
ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರ ಶಕ್ತಿ ತುಂಬಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಅವರು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸಭಾಭವನ ಸೌಹಾರ್ಧ ಇದರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರ ಸಂಘಗಳ ಅಭಿವೃದ್ಧಿಗೆ ಗ್ರಾಮಸ್ಥರು ಕೈ ಜೋಡಿಸಿದಾಗ ಇತರರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಠೇವಣಾತಿ ಭದ್ರತೆ, ಸಾಲ ಮನ್ನಾ ಮೊದಲಾದ ಸವಲತ್ತುಗಳನ್ನು ದೊರಕಿಸಿಕೊಡಲು ಕೇಂದ್ರ ಸಹಕಾರಿ ಬ್ಯಾಂಕ್ ಬದ್ಧವಾಗಿದೆ ಎಂದರು.
ನೂತನ ಸಭಾಭವನ ಸೌಹಾರ್ದ ವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬ್ಯಾಂಕಿಂಗ್ ಕ್ಷೇತ್ರದ ತವರೂರಾರ ದ.ಕ.ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಇಲ್ಲಿನ ಜನರ ಪ್ರಾಮಾಣಿಕತೆಯೇ ಕಾರಣ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಿ.ಪಂ.ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ. ತುಂಗಪ್ಪ ಬಂಗೇರ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಬಂಟ್ವಾಳ ತಾ.ಸಹಕಾರ ಅಭಿವೃದ್ದಿ ಅ„ಕಾರಿ ತ್ರಿವೇಣಿರಾವ್, ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯಗಾರರ ಸಹಕಾರ ಸಂಘದ ಅಧ್ಯಕ್ಷ ಕೆ.ಎ.ಸತೀಶ್ಚಂದ್ರ, ಬಡಗಕಜೆಕಾರು ಗ್ರಾ.ಪಂ. ಅಧ್ಯಕ್ಷ ಬಿ.ವಜ್ರ ಪೂಜಾರಿ ಬಾರ್ದೊಟ್ಟು, ತಾ.ಪಂ.ಸದಸ್ಯೆ ಬೇಬಿ ಕೃಷ್ಣಪ್ಪ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English