ಮಂಗಳೂರು : ಡಿಸೆಂಬರ್ ಅಂತ್ಯಕ್ಕೆ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಜನವರಿ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಗೆ ಶನಿವಾರದಂದು ಭೇಟಿ ನೀಡಿದ ಅವರು, ಪಂಪ್ ವೆಲ್ ಕಾಮಗಾರಿ ಈಗಾಗಲೇ ಪೂರ್ಣಗೊಳ್ಳಬೇಕಿತ್ತು. ಆದರೆ ಕೆಲವೊಂದು ಆಡಳಿತಾತ್ಮಕ, ಕಾನೂನಾತ್ಮಕ ತೊಂದರೆಗಳಿಂದ ಕಾಮಗಾರಿ ವಿಳಂಬವಾಯಿತು. ಜನವರಿ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ವೇಳೆ ಶಾಸಕ ಡಿ. ವೇದವ್ಯಾಸ ಕಾಮತ್, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಸೇರಿದಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.
Click this button or press Ctrl+G to toggle between Kannada and English