ನವದೆಹಲಿ : ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಎನ್ ಸಿಪಿ ವರಿಷ್ಠ ಶರದ್ ಪವಾರ್ ಸೋಮವಾರ ಮಾತುಕತೆ ನಡೆಸುವ ಮುನ್ನವೇ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಉಲ್ಟಾ ಹೊಡೆದಿದ್ದು, ಸರ್ಕಾರ ರಚನೆ ಬಗ್ಗೆ ಬಿಜೆಪಿ ಮತ್ತು ಶಿವಸೇನಾ ತಮ್ಮ ದಾರಿಯನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ತಿಳಿಸಿದ್ದಾರೆ.
ಲೋಕಸಭೆಯ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಜತೆಯಾಗಿ ಸ್ಪರ್ಧಿಸಿದ್ದವು. ನಾವು ಕೂಡಾ ಎನ್ ಸಿಪಿ, ಕಾಂಗ್ರೆಸ್ ಜತೆಯಾಗಿಯೇ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರು ತಮ್ಮ ದಾರಿಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ನಾವು ನಮ್ಮ ರಾಜಕೀಯವನ್ನು ನಿರ್ವಹಿಸುತ್ತೇವೆ ಎಂದು ಹೇಳಿದರು.
ಇಂದು ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವುದಾಗಿ ಪವಾರ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಮುಂದಿನ ರಾಜಕೀಯ ಬೆಳವಣಿಗೆ ಕುರಿತು ಉಭಯ ಮುಖಂಡರು ಚರ್ಚಿಸುವ ಸಾಧ್ಯತೆ ಇದ್ದಿರುವುದಾಗಿ ಕಾಂಗ್ರೆಸ್ ಮೂಲಗಳು ತಿಳಿಸಿವೆ.
Click this button or press Ctrl+G to toggle between Kannada and English