ಬಸವನಹಳ್ಳಿಯಲ್ಲಿ ವೀರಶೈವ ಲಿಂಗಾಯಿತರ ಜಿಲ್ಲಾ ಮಟ್ಟದ ಕ್ರೀಡಾಕೂಟ

5:49 PM, Monday, November 18th, 2019
Share
1 Star2 Stars3 Stars4 Stars5 Stars
(No Ratings Yet)
Loading...

krida-kuta

ಮಡಿಕೇರಿ : ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕ ಹಾಗೂ ಕ್ರೀಡಾ ಸಮಿತಿ ವತಿಯಿಂದ ಜಿಲ್ಲಾಮಟ್ಟದ ವೀರಶೈವ ಲಿಂಗಾಯಿತ ಕ್ರೀಡಾಕೂಟಕ್ಕೆ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತಡನಾಡಿದ ಅವರು, ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು, ಸಮುದಾಯದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಿವುದು ಹಾಗೂ ಜನಾಂಗದಲ್ಲಿ ಸಂಘಟನೆ, ಪ್ರೀತಿ ವಾತ್ಸಲ್ಯವನ್ನು ಬೆಳೆಸಬೇಕು ಎಂದ ಅವರು ಆರೋಗ್ಯಕರ ಜೀವನವನ್ನು ನಡೆಸಲು ಕ್ರೀಡಾಕೂಟ ಸ್ಫೂರ್ತಿಯಾಗಲಿದೆ ಎಂದರು.

ಬೆಂಗಳೂರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ತರಬೇತುದಾರೆ ದೇವರಾಜಮ್ಮ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹ ನೀಡಬೇಕು. ಪ್ರತಿ ಮನೆಯಲ್ಲೂ ಕ್ರೀಡಾ ಸಾಧಕರನ್ನು ಬೆಳೆಸಬೇಕು. ಅದೇ ರೀತಿ ಹೆಣ್ಣು ಮಕ್ಕಳು ಕೂಡ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಸಾಧನೆ ತೋರಬೇಕು ಎಂದರು.

ಕ್ರೀಡಾ ಸಮಿತಿ ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ಅರಿವು ಹಾಗೂ ಸಂಘಟನೆಯ ಉದ್ದೇಶದೊಂದಿಗೆ ಯುವಕರನ್ನು ಒಗ್ಗೂಡಿಸಬೇಕು, ಸಮಾಜದ ಯುವಕರನ್ನು ಸೇರಿಸಿಕೊಂಡು ಸಮುದಾಯವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಿಂದ ಕ್ರೀಡಾಕೂಟಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.

ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ತೀರ್ಪುಗಾರರ ತೀರ್ಮಾನಕ್ಕೆ ಬದ್ಧರಾಗಬೇಕು. ಯಾವುದೇ ವಿವಾದಗಳಿಗೆ ಆಸ್ಪದ ಕೊಡದೆ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಎಚ್.ವಿ.ಶಿವಪ್ಪ, ವಿವಿಧೆಡೆಗಳಲ್ಲಿ ನೆಲೆಸಿರುವ ಸಮುದಾಯದ ಬಾಂಧವರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಪರಸ್ಪರ ಸಹಬಾಳ್ವೆ ಹಾಗೂ ಸಹಕಾರದೊಂದಿಗೆ ಸಮಾಜದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಎಲ್ಲರೂ ಜೊತೆ ಗೂಡಬೇಕು ಎಂದು ಮನವಿ ಮಾಡಿದರು.

krida-kuta

ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತೊರೆನೂರು ವಿರಕ್ತಮಠದ ಶ್ರೀ ಮಲ್ಲೇಶ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭ ತಾಲ್ಲೂಕು ವೀರಶೈವ ಸಮಾಜದ ಅಧ್ಯಕ್ಷ ಹಾಲಪ್ಪ, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಮಹಾದೇವಪ್ಪ, ಕ್ರೀಡಾ ಸಮಿತಿ ಕಾರ್ಯದರ್ಶಿ ಶಾಂಭಶಿವಮೂರ್ತಿ, ಖಜಾಂಜಿ ಎಚ್.ಪಿ.ಉದಯಕುಮಾರ್, ಅಕ್ಕನ ಬಳಗದ ಅಧ್ಯಕ್ಷೆ ಲೇಖನಾ, ವೀರೈಶವ ಸಮಾಜದ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಪ್ರಸನ್ನ, ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಸಂದೀಪ್, ಶಿಕ್ಷಕ ಬಸವರಾಜು, ನಟರಾಜು ಉಪಸ್ಥಿತರಿದ್ದರು.
ಶಿಕ್ಷಕಿ ಲತಾ ನಿರೂಪಿಸಿದರು. ಸಂದೀಪ್ ಸ್ವಾಗತಿಸಿದರು.

ಸನ್ಮಾನ : ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಅಂತರಾಷ್ಟ್ರೀಯ ಹಾಕಿ ಆಟಗಾರ್ತಿ ಡಾ. ಸಿಂಧೂಭರತ್, ಅಂತರಾಷ್ಟ್ರೀಯ ಸೈಕ್ಲಿಂಗ್ ಪಟು ರಜನೀಶ್, ಎಂಇಜಿ ಹಾಕಿ ತರಬೇತುದಾರ ಮದನ್ , ಕ್ರೀಡಾಪಟು ಲವ್ಯಾ, ವಿವೇಕ ದಯಾ, ಸಂದೀಪ್ ರುದ್ರಯ್ಯ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ವಿವಿಧ ಕ್ರೀಡಾಕೂಟ : ಪುರುಷರಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ಥ್ರೋಬಾಲ್, ಪರುಷ ಹಾಗೂ ಮಹಿಳೆಯರಿಗೆ ಹಗ್ಗಜಗ್ಗಾಟ, ಶೆಟಲ್ ಬ್ಯಾಡ್ಮಿಂಟನ್, ಬಾಲಕ-ಬಾಲಕಿಯರಿಗೆ ಓಟ, ಸ್ಟಿಕ್ಕರ್ ಆಂಟಿಸುವುದು, ಒಂಟಿಕಾಲು ಓಟ, ಬಲೂನ್ ಒಡೆಯುವುದು, ಗೋಣಿಚೀಲ ಓಟ, ನಿಂಬೆ ಚಮಚ ಓಟ, ಕಾಲೇಜು ವಿದ್ಯಾರ್ಥಿಗಳಿಗೆ ಓಟ, ಮೂರು ಕಾಲು ಓಟ, ನಿಂಬೆ ಚಮಚ ಓಟ ಸ್ಪರ್ಧೆಗಳು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಿಧಾನ ಸೈಕಲ್ ಚಾಲನೆ ಸ್ಪರ್ಧೆ ನಡೆಸಲಾಯಿತು. ಪರುಷರಿಗೆ ನಿಧಾನ ಬೈಕ್ ಚಾಲನೆ, ಭಾರದ ಗುಂಡು ಎಸೆತ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸಂಗೀತ ಕುರ್ಚಿ, ಬಕೇಟ್‌ಗೆ ಚೆಂಡು ಹಾಕುವುದು ಮತ್ತಿತರ ಕ್ರೀಡೆಗಳನ್ನು ನಡೆಸಲಾಯಿತು.

ಜಾಗೃತಿ ಜಾಥಾ : ಕ್ರೀಡಾ ಕಾರ್ಯಕ್ರಮಕ್ಕೂ ಮುನ್ನ ಕುಶಾಲನಗರದ ಕೊಪ್ಪ ಗೇಟ್‌ನಿಂದ ಬಸವನಹಳ್ಳಿಯ ಕ್ರೀಡಾ ಮೈದಾನದ ವರೆಗೆ ಸಮಾಜದ ಬಾಂಧವರು ಕ್ರೀಡಾಜ್ಯೋತಿಯೊಂದಿಗೆ ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಜಿಲ್ಲೆಗಾಗಿ ಬೈಕ್ ಜಾಥಾ ನಡೆಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English