- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೈಕ್ – ಟೆಂಪೋ ಅಪಘಾತ, ಸವಾರ ಗಂಭೀರ

Ape-accident [1]ಸುಳ್ಯ : ಬೈಕ್ ಹಾಗೂ ಅಪೆ ಟೆಂಪೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೊಗರ್ಪಣೆ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರ ಜಾಲ್ಸೂರು ನಿವಾಸಿ ಜತಿನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.‌