ಗುಡ್ಡಟ್ಟು : ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿಗೆ!

2:53 PM, Wednesday, November 27th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

chirate

ಕುಂದಾಪುರ : ಕಳೆದ ಕೆಲವು ತಿಂಗಳಿನಿಂದ ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡಟ್ಟು ಎಂಬಲ್ಲಿನ ಜನರ ನಿದ್ರೆಗೆಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದ್ದು ಬುಧವಾರ ಮುಂಜಾನೆ ಅರಣ್ಯಾಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅಭಯಾರಣ್ಯಕ್ಕೆ ರವಾನಿಸಿದ್ದಾರೆ.

ಶಂಕರನಾರಾಯಣ ಅರಣ್ಯ ಇಲಾಖೆ ವ್ಯಾಪ್ತಿಗೊಳಪಡುವ ಗುಡ್ಡಟ್ಟು ಭಾಗದಲ್ಲಿ ಚಿರತೆಯೊಂದು ಉಪಟಳ ನೀಡಿದ್ದು ದನ, ನಾಯಿ ಮೊದಲಾದ ಸಾಕು ಪ್ರಾಣಿಗಳು ಚಿರತೆಗೆ ಬಲಿಯಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಬಹಳಷ್ಟು ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಳೆದ ತಿಂಗಳು ಚಂದ್ರಾವತಿ ಗುಡ್ಡೆಮನೆ ಎನ್ನುವರ ಜಾಗದಲ್ಲಿ ಬೋನಿಟ್ಟು ‘ಆಪರೇಶನ್ ಚೀತಾ’ ಗೆ ತಯಾರಿ ನಡೆಸಿತ್ತು. ಬುಧವಾರ ಬೆಳಿಗ್ಗೆ ನೋನಿಗೆ ಚಿರತೆ ಬಿದ್ದಿದ್ದು ಅಂದಾಜು 5 ವರ್ಷ ಪ್ರಾಯದ ಗಂಡು ಚಿರತೆ ಸೆರೆಯಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಜಿ., ಉಪವಲಯ ಅರಣ್ಯಾಧಿಕಾರಿಗಳಾದ ಸಂತೋಷ್, ಹರೀಶ್, ಅರಣ್ಯ ರಕ್ಷಕರಾದ ಗುರುರಾಜ್, ರವೀಂದ್ರ, ಅರಣ್ಯ ವೀಕ್ಷಕರಾದ ಲಕ್ಷ್ಮಣ, ಶಿವು ಮೊದಲಾದವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English