ಖಾಸಗಿ ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಬಂಧನ

1:25 PM, Thursday, November 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Munavvar

ಕಾಸರಗೋಡು : ಖಾಸಗಿ ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಮಲಪ್ಪುರಂ ಕೋಟಕ್ಕಲ್ ಪೊಲೀಸರು ಬಂಧಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಬಂಧಿತನನ್ನು ಕೂಡ್ಲು ನಿವಾಸಿ ಮುನವ್ವರ್ (32) ಎಂದು ಗುರುತಿಸಲಾಗಿದೆ.

ಕಾಸರಗೋಡಿನಲ್ಲಿ ನಡೆಯುತ್ತಿರುವ ಶಾಲಾ ಕಲೋತ್ಸವಕ್ಕೆ ತಿರುವನಂತಪುರದಿಂದ ಬರುತ್ತಿದ್ದ ಕೊಲ್ಲಮ್ ನಿವಾಸಿಯಾದ ಯುವತಿಗೆ ಕಿರುಕುಳ ನೀಡಲು ಯತ್ನಿಸಿದ್ದಾನೆ ಎನ್ನಲಾದ ಘಟನೆ ಮುಂಜಾನೆ ಎರಡು ಗಂಟೆಯ ಸುಮಾರಿಗೆ ನಡೆದಿದೆ.

ಆರೋಪಿಯನ್ನು ಕೋಟಕ್ಕಲ್ ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಈತನನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English