ಉಪ್ಪಿನಂಗಡಿ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪದಲ್ಲಿ ನಡೆದ ಬೈಕೊಂದು ಸ್ಕಿಡ್ ಆಗಿ ರಸ್ತೆಗುರುಳಿದ ಪರಿಣಾಮ ಸಹ ಸವಾರ ಶಾಲಾ ಬಾಲಕ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಕೋಲ್ಪೆ ನಿವಾಸಿ ಗಿರಿಯಪ್ಪ ಎಂಬವರ ಪುತ್ರ ನೆಲ್ಯಾಡಿ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಕಿರಣ್ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಿರಣ್‍ಗೆ ನೆಲ್ಯಾಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Click this button or press Ctrl+G to toggle between Kannada and English