ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಗೋಚರಿಸುತ್ತಿದ್ದು, ಬಿಜೆಪಿ ಹಾಗೂ ಅನರ್ಹ ಶಾಸಕರ ವಿರುದ್ಧವಾದಂತಹ ಗಾಳಿ 15 ಕ್ಷೇತ್ರಗಳಲ್ಲಿ ಬೀಸುತ್ತಿದೆ ಎಂದು ಮಾಜಿ ಸಂಸದ ಜಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ 15 ಕ್ಷೇತ್ರದಲ್ಲಿ ಗೆಲ್ಲುವ ಸೂಚನೆ ಸಿಗುತ್ತಿದೆ. ಇದರಿಂದಲೇ ಬಿಜೆಪಿ ನಾಯಕರು ಹಾಗೂ ಅನರ್ಹ ಶಾಸಕರು ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ಹತಾಶೆಯಿಂದ ಮಾತನಾಡಲು ಆರಂಭಿಸಿದ್ದಾರೆ. ಇವರೆಲ್ಲರೂ ಸದ್ಯ ತಿರುಕನ ಕನಸನ್ನು ಕಾಣುತ್ತಿದ್ದಾರೆ. ಜನರ ದಾರಿ ತಪ್ಪಿಸಲು ಎಲ್ಲಾ 15 ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಎಲ್ಲೆಡೆ ನಾವೇ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಅವರು ಸದ್ಯ ಗೆಲುವಿನ ಅಂತರದ ಕುರಿತು ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಅನರ್ಹ ಶಾಸಕರ ತ್ಯಾಗದಿಂದಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಎಸ್ವೈ ಹೇಳಿದ್ದಾರೆ. ಅನರ್ಹ ಶಾಸಕರ ಹಿತವನ್ನ ನಾವು ಕಾಪಾಡಬೇಕಿದೆ. ಇದರಿಂದಾಗಿ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ. ಅವರ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ. ದೇಶದಲ್ಲಿ ಚುನಾವಣಾ ಆಯೋಗ ಜೀವಂತವಾಗಿದ್ದರೆ ಇದರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇನ್ನು ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮೋಹನ್ ಕೊಂಡಜ್ಜಿ, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English