70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಯುವಕ

4:22 PM, Tuesday, December 3rd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Ram-Kishan

ಲಕ್ನೋ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಹೈದರಾಬಾದ್ ನ ಪಶುವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಸೋಮವಾರ ಕರ್ನಾಟಕದಲ್ಲಿ ಎಂಟು ವರ್ಷದ ಬಾಲಕಿ ಇಂತಹ ಕೃತ್ಯಕ್ಕೆ ಬಲಿಯಾಗಿದ್ದಳು. ಆದರೆ ಉತ್ತರ ಪ್ರದೇಶದಲ್ಲಿ ಯುವಕನೊಬ್ಬ 70 ವರ್ಷದ ವೃದ್ಧೆಯನ್ನು ಅತ್ಯಾಚಾರವೆಸಗಿ ಪೊಲೀಸರ ಅತಿಥಿಯಾಗಿದ್ದಾನೆ.

ಉತ್ತರ ಪ್ರದೇಶ ರಾಜ್ಯದ ಸೋನ್ ಭದ್ರಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಪ್ರಕರಣ ಕಳೆದ ರವಿವಾರ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ.

ಪ್ರಕರಣದ ಆರೋಪಿ ರಾಮ್ ಕಿಶನ್ ನನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ಥೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಆಡಳಿತದ ರಾಜ್ಯದಲ್ಲಿ ಮಹಿಳೆಯರಿಗೆ ಮತ್ತು ರಕ್ಷಣೆಯಿಲ್ಲ ಎಂದಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English