ಮಡಿಕೇರಿ : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಹವ್ಯಾಸವನ್ನು ರೂಢಿಸಿಕೊಂಡು ಸ್ವಾವಲಂಬಿಗಳಾಗಲು ಶ್ರಮವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪೆರಿಗ್ರೀನ್ ಮಚ್ಚಾಡೋ ಅವರು ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನೆಯಲ್ಲಿ ಹೊಲಿಗೆ ಯಂತ್ರ ಇದ್ದಲ್ಲಿ ಪದೇಪದೇ ಟೈಲರ್ ಬಳಿ ಹೋಗುವ ಅವಶ್ಯಕತೆ ಇರುವುದಿಲ್ಲ. ಹರಿದ ಬಟ್ಟೆಗಳನ್ನು ಮನೆಯಲ್ಲಿ ನಾವೇ ಹೊಲಿದುಕೊಳ್ಳಬಹುದು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ನಂತರ ಮಕ್ಕಳು ತಯಾರಿಸಿದ ವಿವಿಧ ವಸ್ತುಗಳ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ವಿರಾಜಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕರಾದ ವೆಂಕಟೇಶ್, ವೃತ್ತಿ ಶಿಕ್ಷಣ ಶಿಕ್ಷಕರ ಸಂಘಧ ಅಧ್ಯಕ್ಷರಾದ ಜಿಮ್ಮಿ ಸಿಕ್ವೇರಾ, ಪ್ರಾಂಶುಪಾಲ ವಿಜಯನ್ ಇದ್ದರು. ವೃತಿ ಶಿಕ್ಷಣ ಕಲಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರೌಢ ಶಾಲೆಗಳ ವೃತ್ತಿ ಶಿಕ್ಷಕರು ತಾವು ತಯಾರಿಸಿದ ವಿವಿಧ ಮಾದರಿಗಳು ಮತ್ತು ಇಬ್ಬರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿದ್ದರು.
Click this button or press Ctrl+G to toggle between Kannada and English