- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಿದ್ಯಾರ್ಥಿನಿ ತರಗತಿಯಲ್ಲಿ ಕುಸಿದು ಬಿದ್ದು ಮೃತ್ಯು : ಪೋಷಕರಿಂದ ಅಂಗಾಂಗ ದಾನ

Rimple [1]

ಗಾಂಧಿನಗರ : ತರಗತಿಯಲ್ಲಿ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟ ಘಟನೆ ಗುಜರಾತಿನ ಸೂರತ್‍ನಲ್ಲಿ ನಡೆದಿದ್ದು, ಪೋಷಕರು ಆಕೆಯ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ರಿಂಪಲ್(12) ಮೃತಪಟ್ಟ ಬಾಲಕಿ. ಭಾವೇಶ್‍ಬಾಯಿ ಸಂಗಾಣಿ ಮಗಳಾಗಿರುವ ರಿಂಪಲ್ ಪಿಪಿ ಸವಾಣಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದಳು. ಮಂಗಳವಾರ ರಿಂಪಲ್ ತರಗತಿಯಲ್ಲೇ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದರು.

ಮಂಗಳವಾರ ಬೆಳಗ್ಗೆ ರಿಂಪಲ್ ತರಗತಿಯಲ್ಲಿ ಭಾಷಣ ಮಾಡಿದ ನಂತರ ತನ್ನ ಜಾಗದಲ್ಲಿ ಹೋಗಿ ಕುಳಿತಿದ್ದಾಳೆ. ಈ ವೇಳೆ ಆಕೆ ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆಗೆ ಹೋದಾಗ ಅಲ್ಲಿ ವೈದ್ಯರು ರಿಂಪಲ್ ಮೃತಪಟ್ಟಿದ್ದಾಳೆ ಎಂದು ಹೇಳಿದ್ದರು.

ರಿಂಪಲ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಮಾಡಿದ ನಂತರ ವೈದ್ಯರು, ಬಾಲಕಿಯ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಪತ್ತೆ ಆಗಿಲ್ಲ. ವರದಿ ಬಂದ ನಂತರ ರಿಂಪಲ್ ಸಾವಿನ ನಿಖರ ಕಾರಣ ತಿಳಿಯುತ್ತದೆ ಎಂದು ತಿಳಿಸಿದ್ದರು.

ಈ ಬಗ್ಗೆ ಕಾಮರೇಜ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯುತ್ತದೆ ಎಂದು ಪ್ರತಿಕ್ರಿಯಿಸಿದ್ದರು. ಇತ್ತ ಪೋಷಕರು ಮಗಳ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.