ಕಾಕೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿ

5:59 PM, Thursday, December 5th, 2019
Share
1 Star2 Stars3 Stars4 Stars5 Stars
(No Ratings Yet)
Loading...

dana

ಮಡಿಕೇರಿ : ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕಾಕೂರು ಗ್ರಾಮದ ನಳಿನಿ ಮಹೇಶ್ ಎಂಬುವವರಿಗೆ ಸೇರಿದ ಹಸುವೊಂದು ಹುಲಿ ದಾಳಿಗೆ ಸಿಲುಕಿ ಸಾವನ್ನಪಿದೆ.

ತೋಟದಲ್ಲಿ ಹಸು ಮೇಯುವ ವೇಳೆ ದಾಳಿ ನಡೆಸಿದ ಹುಲಿ ಹಸುವನ್ನು ಬಲಿ ತೆಗೆದುಕೊಂಡಿದೆ. ಈ ವ್ಯಾಪ್ತಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಹಲವು ಜಾನುವಾರುಗಳನ್ನು ಕೊಂದಿದೆ. ವ್ಯಾಘ್ರನ ಅಟ್ಟಹಾಸ ನಿರಂತರವಾಗಿರುವುದರಿಂದ ಕೂಡಲೆ ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸ್ಥಳೀಯರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English