ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

3:06 PM, Friday, December 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Pratham

ಉಪ್ಪಿನಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಮನೆ ನಿವಾಸಿ ಪ್ರಥಮ್ ಕೊಂಡೆ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇವರು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದರು.

ನಿನ್ನೆ ರಾತ್ರಿ ಮನೆಯಲ್ಲಿದ್ದ ಇವರು ಬೆಳಗ್ಗೆ ಮನೆಯ ಬಳಿಯ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English