ಅತ್ಯಾಚಾರಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ನೀಡಬಾರದು : ರಾಮನಾಥ್​​ ಕೋವಿಂದ್​​

5:11 PM, Friday, December 6th, 2019
Share
1 Star2 Stars3 Stars4 Stars5 Stars
(No Ratings Yet)
Loading...

Ramnath

ನವದೆಹಲಿ : ಶಿಶು ಅತ್ಯಾಚಾರಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎನ್ನುವ ಮೂಲಕ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಂದು ರಾಜಸ್ಥಾನದ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ರಾಷ್ಟ್ರಪತಿ ಕೋವಿಂದ್, ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿಯಾದ ಅತ್ಯಾಚಾರಿಗಳಿಗೆ ಕ್ಷಮಾದಾನಕ್ಕೆ ಅವಕಾಶವೇ ಕೊಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ ರಕ್ಷಣೆ ಅತ್ಯಂತ ಗಂಭೀರ ವಿಚಾರ. ಹಾಗಾಗಿ ಫೋಕ್ಸೋ ಕಾಯ್ದೆಯಡಿ ಶಿಕ್ಷೆಗೊಳಗಾದ ಅತ್ಯಾಚಾರಿಳಿಗೆ ಕ್ಷಮೆ ಕೋರಿಕೆ ಅರ್ಜಿ ಸಲ್ಲಿಸುವ ಅವಕಾಶ ನೀಡಬಾರದು. ಅತ್ಯಾಚಾರಿಗಳಿಗೆ ಇಂತಹ ಅವಕಾಶ ಮಾಡಿಕೊಡಲೇಬಾರದು. ಕ್ಷಮಾದಾನದ ಅರ್ಜಿ ಕುರಿತಂತೆ ಸಂಸತ್ ಪುನರ್ ಪರೀಶಿಲನೆ ನಡೆಸಬೇಕೆಂದು ಹೇಳಿದರು.

ಇಡೀ ಪ್ರಪಂಚದ ಗಮನ ಸೆಳೆದಿದ್ದ ನಿರ್ಭಯಾ ಪ್ರಕರಣದ ಪ್ರಮುಖ ಅತ್ಯಾಚಾರಿ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವಂತೆ ಭಾರತದ ರಾಷ್ಟ್ರಪತಿ ರಮನಾಥ್ ಕೋವಿಂದ್ರಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸು ಮಾಡಿದೆ. ತೆಲಂಗಾಣ ಮೂಲದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪೊಲೀಸರು ನಾಲ್ಕೂ ಅತ್ಯಾಚಾರಿಗಳನ್ನು ಎನ್ಕೌಂಟರ್ನಲ್ಲಿ ಹತ್ಯೆಗೈದ ಬೆನ್ನಲ್ಲೇ ನಿರ್ಭಯಾ ಕೇಸ್ ಪ್ರಕರಣದ ಅಪರಾದಿ ನಮಗೇ ಕರುಣೆ ತೋರಿ ಎಂದು ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ಧಾರೆ. ಆದರೀಗ ಕೇಂದ್ರ ಗೃಹ ಇಲಾಖೆಯೂ ಈ ಅರ್ಜಿ ತಿರಸ್ಕರಿಸುವಂತೆ ರಮನಾಥ್ ಕೋವಿಂದ್ರಿಗೆ ಶಿಫಾರಸು ಮಾಡಿದೆ.

2012ರ ಡಿಸೆಂಬರ್ 16ರಂದು ರಾತ್ರಿ ವೇಳೆ ತನ್ನ ಸ್ನೇಹಿತನೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿಯ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಒಟ್ಟು ಆರು ಮಂದಿ ಅತ್ಯಂತ ಕ್ರೂರ ಹಾಗೂ ಅಮಾನುಷವಾಗಿ ಅತ್ಯಾಚಾರವೆಸಗಿದ್ದರು. ಇದನ್ನು ತಡೆಯಲು ಬಂದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಮೃಗೀಯವಾಗಿ ಅತ್ಯಾಚಾವೆಗಿದ್ದ ಅಪರಾಧಿಗಳು ಯುವತಿಯನ್ನು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆಸೆದಿದ್ದರು. ಈ ಘೋರ ಕೃತ್ಯದಿಂದ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಡಿ. 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ಈ ಆರು ಮಂದಿ ಅಪರಾಧಿಗಳಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಕೇಸ್ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇನ್ನುಳಿದ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು. ಅಲ್ಲದೇ ಆದೇಶವನ್ನು ದೆಹಲಿಯ ಹೈಕೋರ್ಟ್ ಕೂಡಾ ಎತ್ತಿಹಿಡಿದಿತ್ತು.

ಇನ್ನು 2017ರ ವರ್ಷದ ಮೇ 5ರಂದು ಸುಪ್ರೀಂಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು. ಆದರೆ ಮೂವರು ಅಪರಾಧಿಗಳು ತಮಗೆ ವಿಧಿಸಿರುವ ಗಲ್ಲುಶಿಕ್ಷೆಯ ತೀರ್ಪನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿದ್ದರು. ಇಂದು ಮರುಪರಿಶೀಲನಾ ಅರ್ಜಿಯ ತೀರ್ಪು ಪ್ರಕಟಿಸಿದ ಸುಪ್ರೀಂ, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English