ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ -ವಸಂತ ಬಂಗೇರ ಆರೋಪ

1:27 PM, Saturday, December 7th, 2019
Share
1 Star2 Stars3 Stars4 Stars5 Stars
(No Ratings Yet)
Loading...

vasanth-bangeraಬೆಳ್ತಂಗಡಿ :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದ್ದ ಕಾಮಗಾರಿಯನ್ನು ಮತ್ತೆ ಉದ್ಘಾಟಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದು, ಕಾಮಗಾರಿಯ ಲಾಭಪಡೆಯಲು ಮುಂದಾಗಿದ್ದಾರೆ . ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸುತ್ತಿರುವುದು ವಿಷಾದನೀಯ  ಎಂದು ಮಾಜಿ ಶಾಸಕ ವಸಂತ ಬಂಗೇರ ಆರೋಪಿಸಿದ್ದಾರೆ.

ಪಟ್ಟಣ ಪಂಚಾಯತಿಗೆ ಬಂದಿರುವ ಹತ್ತು ಕೋಟಿ ಅನುದಾನದ ಕಾಮಗಾರಿಗಳಲ್ಲಿ ಕೆಲ ಕಾಮಗಾರಿಗಳ ಶಿಲಾನ್ಯಾಸವನ್ನು ಈ ಹಿಂದೆ ಯೇ ನಡೆದಿತ್ತು ಎಂದು ಅವರು ಹೇಳಿದ್ದಾರೆ.

ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಶಿಲಾನ್ಯಾಸ ನೆರವೇರಿಸಲಾಗಿತ್ತು. ಇದೀಗ ಮತ್ತೊಮ್ಮೆ ಬಿಜೆಪಿ ಸರಕಾರ ಶಿಲನ್ಯಾಸ ನಡೆಸಲು ಮುಂದಾಗಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಅವರ ನಡೆ ಸರಿಯಲ್ಲ. ಪಕ್ಷಕ್ಕೆ ಇದು ಶೋಭೆ ನೀಡುವುದಿಲ್ಲ. ಹಾಗೂ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ನಾನು ಪ್ರಯತ್ನಿಸುತ್ತಿದ್ದು, ನನಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ವಸಂತ ಬಂಗೇರ ಆರೋಪಿಸಿದ್ದಾರೆ.

ಇನ್ನು ಜಿಲ್ಲಾಧ್ಯಕ್ಷರ ವಿರುದ್ಧ ಗುಡುಗಿದ ಅವರು, ಜಿಲ್ಲಾಧ್ಯಕ್ಷರ ಕರ್ತವ್ಯವೇನು ಎಂದು ಪ್ರಶ್ನಿಸಿದರು. ಬಿಜೆಪಿ ವಿರುದ್ಧವಾಗಿ ಮಾತನಾಡಿದರೆ ಸಮಸ್ಯೆಯಾಗುತ್ತದೆ ಎನ್ನುವವರು ಬಿಜೆಪಿ ಕಚೇರಿಯಲ್ಲೇ ಇರಲಿ. ಕಾಂಗ್ರೆಸ್ ಪಕ್ಷಕ್ಕೆ ಯಾರು ದ್ರೋಹ ಮಾಡಿದ್ದಾರೋ ಅವರು ಮುಂದಿನ ದಿನಗಳಲ್ಲಿ ಗೆಲ್ಲಬಾರದು, ಅಂತಹವರನ್ನು ತಲೆ ಎತ್ತಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English