ಉಪಚುನಾವಣೆ : ಬಿಜೆಪಿ-12 ಸ್ಥಾನ, ಕಾಂಗ್ರೆಸ್ -2, ಪಕ್ಷೇತರ-1, ಜೆಡಿಎಸ್-0

12:13 PM, Monday, December 9th, 2019
Share
1 Star2 Stars3 Stars4 Stars5 Stars
(No Ratings Yet)
Loading...

yediyurappaಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಆಡಳಿತಾರೂಢ ಬಿಜೆಪಿ 12 ಸ್ಥಾನಗಳನ್ನು ಪಡೆದು, ಜೆಡಿಎಸ್ ಸೂನ್ಯ,  ಪಕ್ಷೇತರ-1  ಹಾಗೂ ಕಾಂಗ್ರೆಸ್ ಕೇವಲ 2 ಸ್ಥಾನಗಳ ಮೂಲಕ ಭಾರೀ ಹಿನ್ನಡೆಯನ್ನು ಪಡೆದಿದೆ.

ಬಿಜೆಪಿ ಸರಕಾರ ರಚನೆಗೆ ಕಾರಣವಾದ  ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ.

ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹಾಗೂ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ವೈ.ಘೋರ್ಪಡೆ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಅವರು, ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧರಿಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಹಾಗೂ ಜೆಡಿಎಸ್ ಅಭ್ಯರ್ಥಿ ಕಾಂತರಾಜು ವಿರುದ್ಧ ಗೆಲವು ಸಾಧಿಸಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ ಕಾಗೆ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಜೆಡಿಎಸ್ ಅಭ್ಯರ್ಥಿ ದೇವರಾಜ್ ಬಿಎಲ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಇನ್ನು ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿಯವರು ಕಾಂಗ್ರೆಸ್ ಅಭ್ಯರ್ಥಿ ಜಿ.ಬಿ.ಮಂಗ್ಸೂಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English