ಉಪಚುನಾವಣೆಯಲ್ಲಿ ಸೋಲಿಗೆ ಕಾರಣವೇನು ಎಂಬ ಬಗ್ಗೆ ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ; ಡಿಕೆ ಶಿವಕುಮಾರ್​​

12:55 PM, Tuesday, December 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

DK-Shiv-Kumar

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಏನು? ಯಾಕೆ ನಮಗೆ ಹಿನ್ನೆಡೆಯಾಯಿತು ಎಂಬ ಬಗ್ಗೆ ಶೀಘ್ರದಲ್ಲಿಯೇ ಬಹಿರಂಗ ಪಡಿಸುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಫಲಿತಾಂಶದ ಕುರಿತು ಇಂದು ಪ್ರತಿಕ್ರಿಯಿಸಿದ ಅವರು, ಚುನಾವಣಾ ಸೋಲಿನ ಬಗ್ಗೆ ಈಗಲೇ ಏನು ಹೇಳುವುದಿಲ್ಲ. ಆದರೆ, ಈ ಸೋಲಿಗೆ ಕಾರಣ ಏನು, ಯಾಕೆ ಹೀಗಾಯ್ತು ಎಂಬ ಬಗ್ಗೆ ಎಲ್ಲವನ್ನು ಸವಿವರವಾಗಿ ಹೇಳುತ್ತೇನೆ. ನಾಡಿನ ಜನರ ಮುಂದೆ ಎಲ್ಲಿ ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿಸುತ್ತೇನೆ. ಆದರೆ, ಇದಕ್ಕೆ ಈಗ ಸೂಕ್ತ ಸಮಯವಲ್ಲ ಎಂದಿದ್ದಾರೆ.

ಚುನಾವಣೆಯಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಭರವಸೆಯಲ್ಲಿದ್ದ ಕಾಂಗ್ರೆಸ್ಗೆ ಫಲಿತಾಂಶ ಭಾರೀ ಆಘಾತ ನೀಡಿದೆ. ಅಲ್ಲದೇ, ಈ ಸೋಲಿನ ಹೊಣೆ ಹೊತ್ತು ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಸ್ಥಾನ ಹಾಗೂ ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.

ದಿನೇಶ್ ಗುಂಡೂರಾವ್ ರಾಜೀನಾಮೆ ಬಳಿಕ ಆಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಏನೂ ಹೇಳುವುದಿಲ್ಲ. ಸಮಯ ಬರಲಿ ಬನ್ನಿ ಎಲ್ಲವನ್ನೂ ಮಾತನಾಡೋಣ ಎಂದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English