ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ವಾಹನ ಜಾಥಕ್ಕೆ ಚಾಲನೆ

2:53 PM, Saturday, October 27th, 2012
Share
1 Star2 Stars3 Stars4 Stars5 Stars
(No Ratings Yet)
Loading...

Plastic awareness programಮಂಗಳೂರು: ಮಂಗಳೂರು ತಾಲೂಕಿನಾದ್ಯಂತ ಪ್ಲಾಸ್ಟಿಕ್ ನಿಂದ ತಯಾರಿಸಲ್ಪಟ್ಟ ವಸ್ತುಗಳನ್ನು ನವೆಂಬರ್ 1ರಿಂದ ನಿಷೇಧಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಗುಲ್ಜಾರ್ ಬಾನುರವರು ಶುಕ್ರವಾರ ಜಿಲ್ಲಾಧಿಕಾರಿ ಬಳಿಯಲ್ಲಿ ಪ್ಲಾಸ್ಟಿಕ್ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ಲಾಸ್ಟಿಕ್ ನಿಂದಾಗುವ ತೊಂದರೆಯ ಬಗ್ಗೆ ಜನರಲ್ಲಿ ಈ ವಾಹನವು ಜಾಗೃತಿ ಮೂಡಿಸಲಿದ್ದು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು.

ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪ ಗೌಡರವರು ಮಾತನಾಡಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡಲಾಗಿದೆ, ಮಾಹಿತಿ ವಿನಿಮಯ ನಡೆಸಲಾಗಿದೆ ಬಳಕೆ ಮುಂದುವರಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ್, ಪಾಲಿಕೆ ಆಯುಕ್ತ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English