ಪ್ರವಾಸಿಗರಿಂದ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ

9:42 AM, Wednesday, December 11th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Dubare

ಮಡಿಕೇರಿ : ದುಬಾರೆ ಆನೆ ಕ್ಯಾಂಪ್ ವೀಕ್ಷಿಸಲು ಬಂದಿದ್ದ ಪ್ರವಾಸಿಗರು ಅರಣ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಶಾಲನಗರದ ದುಬಾರೆ ಪ್ರವಾಸಿತಾಣದಲ್ಲಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ದುಬಾರೆ ಆನೆ ಶಿಬಿರ ನೋಡಲು ಮಂಗಳೂರಿನಿಂದ ತಡವಾಗಿ ಬಸ್‌ನಲ್ಲಿ ಬಂದಿದ್ದ ಪ್ರವಾಸಿಗರ ತಂಡ ಸಾಕಾನೆ ಶಿಬಿರಕ್ಕೆ ಹೋಗಲು ಬೋಟ್ ಬೇಕು ಎಂದು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕೇಳಿದ್ದಾರೆ. ಅದಕ್ಕೆ ಸಿಬ್ಬಂದಿ ಸಮಯ ಮೀರಿದ ಹಿನ್ನೆಲೆ ಬೋಟ್‌ನಲ್ಲಿ ಕರೆಯೊಯ್ಯಲು ಸಿಬ್ಬಂದಿ ನಿರಾಕರಿಸಿದ್ದಾರೆ ಎನ್ನುವ ಕಾರಣಕ್ಕೆ ಪ್ರವಾಸಿಗರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳ ನಡುವೆ ಜಗಳ ಏರ್ಪಟ್ಟಿದ್ದು, ಪರಸ್ಪರ ಕೈ ಮಿಲಾಯಿಸುವ ಹಂತ ತಲುಪಿದೆ. ಇದಕ್ಕೆ ಆಕ್ರೋಶಗೊಂಡ ಪ್ರವಾಸಿಗರು ಅರಣ್ಯ ಇಲಾಖೆಯ ದಿನಗೂಲಿ ನೌಕರರಾದ ರವಿ, ತಮ್ಮಯ್ಯ ಹಾಗೂ ರಮೇಶ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English