ಕಾರ್ಕಳ : ಕುಡಿದ ಮತ್ತಿನಲ್ಲಿ ತಂದೆ ಹಾಗೂ ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಕೊಲೆಯಾದ ಯುವಕನಾಗಿದ್ದಾನೆ. ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ತನ್ನ ಸ್ವಂತ ಮಗನಿಗೆ ಚೂರಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ವಿವಿಯನ್ ನ ಸಹೋದರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English