ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾದ ರಮೇಶ್ ಕೆ.

2:58 PM, Friday, December 13th, 2019
Share
1 Star2 Stars3 Stars4 Stars5 Stars
(No Ratings Yet)
Loading...

Raresh

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ರಮೇಶ್ ಕೆ. ಅವರನ್ನು ರಾಜ್ಯ ಸರಕಾರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಗಳ ಅಧಿನಿಯಮ 28(1)ರನ್ವಯ 39(1)ರ ಉಪಬಂಧಕ್ಕೊಳಪಟ್ಟು ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ರಮೇಶ್ ಕೆ. ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ನಾಮನಿರ್ದೇಶನ ಮಾಡಿದೆ.

ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿಯನ್ನು (ಎಂಎ) ಹಾಗೂ ಸರಕಾರಿ ಪಾಲಿಟೆಕ್ನಿಕ್ ಕೊಪ್ಪಳದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. 2001ರಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ, ಎಬಿವಿಪಿಯ ವಿವಿಧ ಶೈಕ್ಷಣಿಕ ವಿಷಯಗಳ ಹೋರಾಟದ ನೇತೃತ್ವ ವಹಿಸಿದ್ದಾರೆ.

ಮಂಗಳೂರು ಇನಿಷಿಯೇಟಿವ್ ಫಾರ್ ನ್ಯಾಶನಲಿಸ್ಟಿಕ್ ಡೈಲಾಗ್‌ನ ಸಂಚಾಲಕರಾಗಿ, ನ್ಯಾಶನಲ್ ಯುವ ಕೋ-ಆಪರೇಟಿವ್ ಸೊಸೈಟಿಯ ರಾಜ್ಯ ಸಂಚಾಲಕರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ. ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಹಾಗೂ ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English