ಮಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ ಬಳಿಕ ಶುಕ್ರವಾರ ಮಂಗಳೂರಿಗೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರನ್ನು ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ಅವರು ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಬೆಂಗಳೂರು ಮೇಯರ್ ಆಯ್ಕೆ, ನಗರ ಸ್ಥಳೀಯಾಡಳಿತ ಚುನಾವಣೆ ಮತ್ತು ಉಪಚುನಾವಣೆಗಳು ಎದುರಾದವು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದೆ ನಳಿನ್ ಹೇಳಿದರು.
ದ.ಕ ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆಯಲ್ಲಿ ಈ ಬಾರಿ ಶೇ.90ರಷ್ಟು ಪಂಚಾಯತ್‌ಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನಿಟ್ಟು ಕೆಲಸ ಮಾಡಬೇಕಿದೆ. ಆ ಮೂಲಕ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತಗೊಳಿಸಲು ಶ್ರಮಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯ ಮೂಲಕ ನರೇಂದ್ರ ಮೋದಿ ನೇತೃತ್ವದ ಸರಕಾರ 1.5 ಕೋಟಿ ಹಿಂದೂಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಿದೆ. ಮೋದಿಯ ಈ ಆಡಳಿತಾವಧಿಯಲ್ಲಿಯೇ ರಾಮಮಂದಿರ ನಿರ್ಮಾಣವಾಗುವ ವಿಶ್ವಾಸವಿದೆ ಎಂದು ನಳಿನ್ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಿತ ಸಂಪುಟದ ಎಲ್ಲ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ನಡೆಸಿದ ಪ್ರಯತ್ನದ ಫಲವನ್ನು ನಾವಿಂದು ಉಪಚುನಾವಣೆಯ ಫಲಿತಾಂಶದ ಮೂಲಕ ಅನುಭವಿಸುತ್ತಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕ ಯೋಗೀಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ರವಿಶಂಕರ್ ಮಿಜಾರ್ ಕಾರ್ಯಕ್ರಮ ನಿರೂಪಿಸಿದರು.
Click this button or press Ctrl+G to toggle between Kannada and English