ಬಂಟ್ವಾಳ : ಗೋವು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

10:12 AM, Saturday, December 14th, 2019
Share
1 Star2 Stars3 Stars4 Stars5 Stars
(No Ratings Yet)
Loading...

bantwal

ಬಂಟ್ವಾಳ : ಜಾನುವಾರುಗಳ ಕಳವು ಪ್ರಕರಣದ ಆರೋಪದ ಮೇರೆಗೆ ಪೊಲೀಸರು ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ನಿವಾಸಿ ನಜಾದುದ್ದೀನ್ ಹಾಗೂ ಅರ್ಕುಳ ಗ್ರಾಮದ ಅಬ್ದುಲ್ ಸಲಾಂ ಬಂಧಿತ ಆರೋಪಿಗಳು.

ನವೆಂಬರ್ 28ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡುವಿನಲ್ಲಿ ಸಜೀಪದಿಂದ ಕಂಚಿನಡ್ಕಕ್ಕೆ ತೆರಳುವ ರಸ್ತೆಯಲ್ಲಿ ದನಗಳ ಕಳವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಓಮ್ನಿ ಕಾರು ಹಾಗೂ ಕಳವು ಮಾಡಿದ್ದ ಹಸುವನ್ನೂ ವಶಕ್ಕೆ ಪಡೆದಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English