ಮೈಸೂರು : ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ಮುಗಿಸಲು ಇನ್ನೂ ಒಂದು ತಿಂಗಳು ಬೇಕಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹೇಳಿದರು.
ನಗರದಲ್ಲಿ ಜನಸ್ನೇಹಿ ಕಾರ್ಯಾಗಾರ ಉದ್ಘಾಟನೆಯ ಬಳಿಕ ಶಾಸಕ ತನ್ವೀರ್ ಸೇಠ್ ಪ್ರಕರಣ ನಡೆದು ಒಂದು ತಿಂಗಳಾದರೂ ಆರೋಪಿ ಸ್ಥಳದಲ್ಲೇ ಸಿಕ್ಕರೂ ಅಂತ್ಯ ಕಂಡಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಕರಣ ಮುಗಿಸಲು ಇನ್ನೂ ಒಂದು ತಿಂಗಳು ಬೇಕಾಗುತ್ತೆ. ನಾವು ಯಾವುದೇ ಅಥವಾ ಯಾರದ್ದೇ ಒತ್ತಡಕ್ಕೂ ಮಣಿದಿಲ್ಲ. ಇಲ್ಲಿಯವರೆಗೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಕರಣದ ಹಿಂದೆ ಸಂಘಟನೆಯೊಂದರ ಕೈವಾಡ ಇದೆ ಎನ್ನುವ ಬಗ್ಗೆಯೂ ಈಗಲೇ ಹೇಳಲಾಗುವುದಿಲ್ಲ.
ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಈ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ನಾವು ಕಾಲ ಕಾಲಕ್ಕೆ ಕೋರ್ಟ್‌ಗೆ ವರದಿ ಸಲ್ಲಿಸುತ್ತಿದ್ದೇವೆ. ಚಾರ್ಜ್‌ಶೀಟ್ ಸಲ್ಲಿಸಲು 90 ದಿನಗಳ ಅವಕಾಶ ಇದೆ. ಅಷ್ಟರಲ್ಲಿ ಸಮಗ್ರ ತನಿಖೆ ಮಾಡಿ ವರದಿ ಸಲ್ಲಿಸುತ್ತೇವೆ ಎಂದರು.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು 12ಗಂಟೆಯಿಂದ ಒಂದು ಗಂಟೆಯವರೆಗೆ ವಿಸ್ತರಿಸುತ್ತೇವೆ. ಜನರ ಸುರಕ್ಷತೆಗೆ ಸಂಬಂಧಿಸಿದಂತೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು.
ಯುವ ಜನತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಾರೆ.ಹೆಲ್ಮೆಟ್ ಧರಿಸದೇ, ಕೂಗಾಡುತ್ತ, ತ್ರಿಬ್ಬಲ್ ರೈಡ್ ಮಾಡಿ ಹೋಗುತ್ತಾರೆ. ಅದನ್ನು ನಿಷೇಧ ಮಾಡಲು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದ ರೀತಿಯಲ್ಲಿ ಕ್ರಮವಹಿಸಲಾಗುವುದು ಎಂದರು
Click this button or press Ctrl+G to toggle between Kannada and English