ಮಹಿಳೆಯರ ಮತ್ತು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಪಿಐಎಂ ಪ್ರತಿಭಟನೆ

1:20 PM, Wednesday, October 31st, 2012
Share
1 Star2 Stars3 Stars4 Stars5 Stars
(5 rating, 1 votes)
Loading...

CPIMಮಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಹಿಳೆಯರ ಮತ್ತು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ಸಭೆ ನಡೆಯುತ್ತಿದ್ದು ಅದರ ಅಂಗವಾಗಿ ಜಿಲ್ಲಾಧಿಕಾರಿ ಕಛೇರಿ ಬಳಿ ನಿನ್ನೆ ಪ್ರತಿಭಟನಾ ಸಭೆ ನಡೆಯಿತು.

CPIMಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂನ ಜಿಲ್ಲಾ ಕಾರ್ಯದರ್ಶಿ ಬಿ.ಮಾಧವ ಮಾತನಾಡಿ ವಿಕೃತ ಮನೋಭಾವದ ಜನರಿಂದ ಈ ಸಮಾಜದಲ್ಲಿ ಪೊಲೀಸರು ಮತ್ತು ಸರಕಾರ ಮಹಿಳೆಯರ ಮಾನ ರಕ್ಷಣೆ ಮಾಡುವಲ್ಲಿ ವಿಫಲವಾಗುತ್ತಿದೆ. ಹರ್ಯಾಣದಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

CPIMದೇಶದ ಅನೇಕ ರಾಜ್ಯಗಳಲ್ಲಿ ಇಂತಹ ಅನಾಚಾರಗಳು ನಡೆಯುತ್ತಿವೆ. ಇದಕ್ಕಾಗಿ ದೇಶವ್ಯಾಪಿಯಾಗಿ ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ ಎಂದರು.

ಸಿಪಿಐಎಂ ನ ರಾಜ್ಯ ಕಾರ್ಯದರ್ಶಿ ಜೆ.ಎ ಶ್ರೀ ರಾಮರೆಡ್ಡಿ ಮಾತನಾಡಿ ಹೆಣ್ಣನ್ನು ಪವಿತ್ರ ಎಂದು ಪೂಜಿಸುತ್ತಿರುವ ದೇಶದಲ್ಲಿ ಇಂದು ಅತೀ ಹೆಚ್ಚು ದೌರ್ಜನ್ಯಗಳು ನಡೆಯುತ್ತಿವೆ. ನ್ಯಾಷನಲ್ ಕ್ರೈಂ ಬ್ಯೂರೊ ವರದಿ 2011-2012 ರ ಪ್ರಕಾರ ಪ್ರತಿ ಗಂಟೆಗೆ ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಮಾನಭಂಗ ನಡೆಯುತ್ತಿದೆ. ಇದು ಕೇವಲ ಒಂದು ವಯಸ್ಸಿನವರ ಮೇಲೆ ಅಲ್ಲ ಮಕ್ಕಳಿಂದ ಹಿಡಿದು ಮುದುಕರ ವರೆಗೂ ನಡೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು ಇಂತಗ ಕೃತ್ಯಗಳ ಮೇಲೆ ಸರಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಇನ್ನಷ್ಟು ಉಗ್ರರೀತಿಯಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English