ಮಂಗಳೂರು ನಗರದಲ್ಲಿ ಡಿಸೆಂಬರ್ 20 ಶಾಲಾ ಕಾಲೇಜುಗಳಿಗೆ ರಜೆ, ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ

11:00 PM, Thursday, December 19th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

lati Charge ಮಂಗಳೂರು : ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರೇಟ್ ತಿಳಿಸಿದೆ.

ಡಿಸೆಂಬರ್ 19 ಗುರುವಾರದಂದು ಮಂಗಳೂರಲ್ಲಿ ಗುಂಪೊಂದು ಪೊಲೀಸರ ಮೇಲೆ ಹಿಂಸಾಚಾರ ನಡೆಸಿದ  ಹಿನ್ನಲೆಯಲ್ಲಿ ನಗರದಲ್ಲಿ ಇನ್ನಷ್ಟು ಗಲಭೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ  ಮಂಗಳೂರಿನಲ್ಲಿ ಈ ಕಾಯ್ದೆಗೆ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ನಿಷೇಧಾಜ್ಞೆ ಉಲ್ಲಂಘಿಸಿ  ಪೊಲೀಸರ ಎಚ್ಚರಿಕೆ  ನಡುವೆಯೂ  ಗುಂಪೊಂದು  ಪ್ರತಿಭಟನೆ ಹೆಸರಲ್ಲಿ ಸ್ಟೇಟ್ ಬ್ಯಾಂಕ್ ಬಳಿ ಗುಂಪು ಸೇರಿತ್ತು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಿಂಸಾಚಾರ ನಡೆಸಲು ಮುಂದಾಗಿದೆ. ಮಾನವೀಯತೆ ಮರೆತು  ಮಂಗಳೂರಿನಲ್ಲಿ ಹಿಂಸಾಚಾರ  ನಡೆಸಲು ಮುಂದಾದ   ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ  ಕ್ರಮವಾಗಿ ಶುಕ್ರವಾರದಂದು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

lati Charge

lati Charge

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English