ನಗರದ ಜನತೆ ಶಾಂತಿ ಕಾಪಾಡುವಂತೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮನವಿ

2:31 PM, Friday, December 20th, 2019
Share
1 Star2 Stars3 Stars4 Stars5 Stars
(No Ratings Yet)
Loading...

Kota-srinivasa-poojaryಮಂಗಳೂರು : ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಗರದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಮಹಾನಗರದ ಜನತೆ ಶಾಂತಿಯನ್ನು ಕಾಪಾಡಬೇಕು. ಶಾಂತಿ ಸುವ್ಯವಸ್ಥೆ, ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಬೇಕು ಎಂದು ಮಹಾನಗರದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆಯಿಂದ ಇದ್ದಂತಹ ಇತಿಹಾಸವಿದೆ. ಆದ್ದರಿಂದ ಶಾಂತಿ ಸುವ್ಯವಸ್ಥೆಯಿಂದ ಜನತೆ ಬಾಳಬೇಕೆಂದರು.

ಇನ್ನು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಾಗೂ ಎಚ್ಚರಿಕೆಯ ಹೆಜ್ಜೆ ಇಡುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English