ಪೇಜಾವರ ಶ್ರೀಗಳ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಲಿರುವ ಉಮಾ ಭಾರತಿ, ಸಿದ್ದರಾಮಯ್ಯ

11:23 AM, Monday, December 23rd, 2019
Share
1 Star2 Stars3 Stars4 Stars5 Stars
(No Ratings Yet)
Loading...

pejawar

ಮಣಿಪಾಲ : ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅನಾರೋಗ್ಯದಿಂದಾಗಿ ಕಳೆದ ಶುಕ್ರವಾರ ಪೇಜಾವರ ಶ್ರೀಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತಕ ಉಸಿರಾಟ ವ್ಯವಸ್ಥೆ ಮುಂದುವರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿದಿದೆ.

ಔಷಧ ಪ್ರಮಾಣ ಹೆಚ್ಚಿಸುವ ಅಥವಾ ಚಿಕಿತ್ಸಾ ವಿಧಾನ ಬದಲಿಸುವ ಬಗ್ಗೆ ಇಂದು ವೈದ್ಯರ ತಂಡ ತೀರ್ಮಾನ ಮಾಡಲಿದೆ.

ಬಿಜೆಪಿ ಹಿರಿಯ ನಾಯಕಿ, ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಇಂದು ಉಡುಪಿಗೆ ಆಗಮಿಸಲಿದ್ದು, ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.

ವಿಧಾನಸಭೆಯ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಆಗಮಿಸಲಿದ್ದು, ನಂತರ ಶ್ರೀಗಳ ಯೋಗಕ್ಷೇಮ ವಿಚಾರಿಸಲು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English