ಮಂಗಳೂರು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ತಾಲೂಕು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಕದ್ರಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು.
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಬಳಿಯಿರುವ ಅಭಿಷೇಕ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮವನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ. ಜೆ. ಶೆಟ್ಟಿ ದೀಪ ಬೆಳಗಿ ಉದ್ಘಾಟಿಸಿದರು.
ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ಅಧ್ಯಕ್ಷಎಸ್. ಪ್ರದೀಪ ಕುಮಾರ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಶ್ರೀ ಹರಿ, ಜೈನ್ ಟ್ರಾವೆಲ್ಸ್ ಮಾಲಕ ರತ್ನಾಕರ ಜೈನ್, ಕಾರ್ಪೋರೇಟರ್ಗಳಾದ ಮನೋಹರ್ ಶೆಟ್ಟಿ ಹಾಗೂ ಶಕೀಲಾ ಕಾವ, ಕದ್ರಿ ವಲಯ ಅಧ್ಯಕ್ಷೆ ಸುಚಿತ್ರಾ ಶಿವಾನಂದ ಅತಿಥಿಗಳಾಗಿ ಉಪಸ್ಥಿತರಿದ್ದರು. ಬ್ರಹ್ಮಶ್ರೀ ದೇರೆಬೈಲು ವಿಠಲದಾಸ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಿದರು.
ಜ್ಞಾನ ವಿಕಾಸ ಕೇಂದ್ರದ ಮೇಲ್ವಿಚಾರಕಿ ಚಂದ್ರ ಮೋಹಿನಿ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಗ್ರಾಯತ್ರಿ ಭಟ್ ಧನ್ಯವಾದ ಸಮರ್ಪಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕದ್ರಿ ವಲಯದ ಮೇಲ್ವಿಚಾರಕಿ ಲತಾ ನಿರೂಪಿಸಿದರು.
Click this button or press Ctrl+G to toggle between Kannada and English