ಪುತ್ತೂರು : ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

10:04 AM, Tuesday, December 24th, 2019
Share
1 Star2 Stars3 Stars4 Stars5 Stars
(No Ratings Yet)
Loading...

Puttur

ಪುತ್ತೂರು : ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ನರೇಂದ್ರ ಅಲಿಯಾಸ್ ಬಾಬು, ಟಿ.ಬಾಬು, ಟಿ.ಕಾಳಿ ರಾಜ್, ಎಂ. ಕಮಲ ಕನ್ನನ್ ಬಂಧಿತ ಆರೋಪಿಗಳು.

ಆರೋಪಿಗಳು ಪುತ್ತೂರು ತಾಲ್ಲೂಕು ನೆಟ್ಟಣದ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English