ಕೇರಳದಲ್ಲಿ ಸಿಎಂ ಯಡಿಯೂರಪ್ಪಗೆ ಕಪ್ಪು ಬಾವುಟ ಪ್ರದರ್ಶನ : ಎಸ್​​​ಎಫ್​​ಐ ಮತ್ತು ಕಾಂಗ್ರೆಸ್​​ನ ಐವರು ಬಂಧನ​​

11:06 AM, Thursday, December 26th, 2019
Share
1 Star2 Stars3 Stars4 Stars5 Stars
(No Ratings Yet)
Loading...

BSY

ತಿರುವನಂತಪುರಂ : ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಆರೋಪದ ಮೇಲೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಾಂಗ್ರೆಸ್ನ ಐವರು ಕಾರ್ಯಕರ್ತರ ಬಂಧನವಾಗಿದೆ. ಸಿಪಿಐನ ಭಾರತೀಯ ವಿದ್ಯಾರ್ಥಿ ಫೆಡರೇಶನ್‌(ಎಸ್‌ಎಫ್‌ಐ)ನ ಮೂವರು ಮತ್ತು ಯುವ ಕಾಂಗ್ರೆಸ್ನ ಇಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ.

ಕಳೆದ ಎರಡು ದಿನಗಳ ಹಿಂದೆ ಸೋಮವಾರ(ಡಿ.23) ರಾತ್ರಿ ಕೇರಳದ ತಿರುವನಂತಪುರಂ ಪ್ರವೇಶಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪನವರ ಕಾರಿಗೆ ಅಡ್ಡ ಹಾಕಿದ್ದ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಮತ್ತು ಕೇರಳದ ಪತ್ರಕರ್ತರನ್ನು ಪೊಲೀಸ್ ವಶಕ್ಕೆ ಪಡೆದಿದ್ದನ್ನು ಖಂಡಿಸಿ ಸಿಎಂ ಕಾರಿಗೆ ಅಡ್ಡ ಹಾಕಿದ್ದರು. ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಯಡಿಯೂರಪ್ಪನವರಿಗೆ ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದರು.

ಇದರ ಮುರುದಿನ ಮತ್ತೆ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇರಳ ಸ್ಟೂಡೆಂಟ್ಸ್ ಯೂನಿಯನ್(ಕೆಎಸ್ಯು) ಕಾರ್ಯಕರ್ತರು ಪ್ರತಿಭಟಿಸಿದ್ದರು. ಇಲ್ಲಿನ ತಿರವನಂತಪುರಂ ಏರ್ಪೋರ್ಟ್ನಿಂದ ಕಣ್ಣೂರು ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲು ಸಿಎಂ ಕಾರಿನಲ್ಲಿ ತೆರಳುತ್ತಿದ್ದಾಗ ಕೆಎಸ್ಯು ಕಾರ್ಯಕರ್ತರು ಪ್ರತಿಭಟಿಸಿದ್ದರು. ಮಂಗಳೂರಿನಲ್ಲಿ ಗೋಲಿಬಾರ್ ನಡೆದಾಗ ವರದಿ ಮಾಡಲು ಬಂದಿದ್ದ ಕೇರಳ ಪತ್ರಕರ್ತರನ್ನು ಬಂಧಿಸಿದ್ದಕ್ಕಾಗಿ ಕೆಎಸ್ಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಕೆಎಸ್ಯು ಕಾರ್ಯಕರ್ತರನ್ನು ಕೇರಳ ಪೊಲೀಸರು ಬಂಧಿಸಿದ್ದು, ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗಿ ಭದ್ರತೆ ನೀಡಿದ್ದರು.

ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿದ್ದರು. ಆಗ ಇಬ್ಬರ ಮೃತದೇಹಗಳನ್ನು ಇಟ್ಟಿದ್ದ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ವರದಿ ಮಾಡಲು ತೆರಳಿದ್ದ ಕೇರಳದ ಏಳು ಪತ್ರಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು.

ಬಳಿಕ ವಶಕ್ಕೆ ಪಡೆದ ಪತ್ರಕರ್ತರನ್ನು ಬಿಡುಗಡೆ ಮಾಡುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದರು. ಕೇರಳ ಸಿಎಂ ಮನವಿ ಪತ್ರದ ಬಳಿಕ ಬಂಧಿತ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English