ಮಡಿಕೇರಿ : ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ನೂತನ ಕಟ್ಟಡ ಹಾಗೂ ಸಭಾಂಗಣ ಉದ್ಘಾಟನೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಘಟಕದ ಉದ್ಘಾಟನಾ ಸಮಾರಂಭವು ಗುರುವಾರ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳುತ್ತಾ ಸಮಾಜ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುನೀತಾ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮೇಕೇರಿ ಗ್ರಾ.ಪಂ. ಉಪಾಧ್ಯಕ್ಷರಾದ ಭೀಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಸುಕುಮಾರ್, ಜಿಲ್ಲಾ ಶಿಕ್ಷಣ ಸಂಯೋಜಕರಾದ ಕಾಶಿನಾಥ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ವೆಂಕಟೇಶ್, ಎಸ್.ಡಿ.ಎಂ.ಸಿ. ಗೌರವ ಅಧ್ಯಕ್ಷರಾದ ಅಬೂಬಕರ್, ಎಸ್.ಡಿ.ಎಂ.ಸಿ. ಸದಸ್ಯರಾದ ಗೌರಿ, ಮುಖ್ಯಶಿಕ್ಷಕರಾದ ರಾಮಚಂದ್ರ ಕೆ. ಎ., ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಮಚಂದ್ರ ಅವರು ಸ್ವಾಗತಿಸಿದರು. ಭವಾನಿಶಂಕರ್ ವಂದಿಸಿದರು. ಗಾಯತ್ರಿ ದೇವಿ ಅವರು ನಿರೂಪಿಸಿದರು.
Click this button or press Ctrl+G to toggle between Kannada and English