ಮಂಗಳೂರು : ಗೂಂಡಾಗಳು ಕರ್ನಾಟಕವನ್ನು ತಮ್ಮ ರಾಜ್ಯ ಎಂದು ಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಗೂಂಡಾ ರಾಜ್ಯವಾಗಲು ಬಿಡಲ್ಲ. ರಾಜ್ಯ ಸರ್ಕಾರ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಯುಟಿ ಖಾದರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದರೆ ರಾಜ್ಯ ಹೊತ್ತಿ ಉರಿಯಲಿದೆ ಎಂಬ ಖಾದರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಪ್ರತಿಭಟನೆ ಹೆಸರಿನಲ್ಲಿ ಯಾರು ಹಾನಿ ಮಾಡುತ್ತಾರೋ ಅವರನ್ನೇ ಹೊಣೆಯಾಗಿಸುತ್ತೇವೆ ಎಂದು ಹೇಳಿದರು.
Click this button or press Ctrl+G to toggle between Kannada and English