ಬಂಟ್ವಾಳ : ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚಿಸಿದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪಂಪುವೆಲ್ ನ ಅಪಾರ್ಟ್‌ಮೆಂಟ್ ವೊಂದರ ನಿವಾಸಿ ಬಶೀರ್ ಯಾನ್ ಹಸನ್ ಬಶೀರ್ ಬಂಧಿತ ಆರೋಪಿ. ಈತ ಫರಂಗಿಪೇಟೆಯ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ವಾಹನದ ನಕಲಿ ದಾಖಲೆಯ ಮೂಲಕ 7 ಲಕ್ಷ ರೂ. ಸಾಲ ಪಡೆದಿದ್ದರು.
ಆರೋಪಿಯು ಕ್ಯಾರ್ವಾನ್ ಆಟೋಮೊಬೈಲ್ಸ್ ಸಂಸ್ಥೆಯ ಹೆಸರಿನಲ್ಲಿ ನಕಲಿ ವ್ಯವಹಾರ ನಡೆಸಿ, ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದಿರೆ ಮೊದಲಾದೆಡೆ 2 ಕೋಟಿ ರೂ.ಗಳಿಗೂ ಅಧಿಕ ಹಣ ಪಡೆದು ವಂಚಿಸಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಇದರ ಹಿಂದಿರುವ ಜಾಲದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English