ಕೆಎಸ್​​​ಆರ್​ಟಿಸಿ ಬಸ್-ಸ್ಕೂಟರ್ ಮಧ್ಯೆ ಅಪಘಾತ : ಮಹಿಳೆ ಸ್ಥಳದಲ್ಲೇ ಮೃತ್ಯು, ಪತಿ ಗಂಭೀರ

3:25 PM, Friday, December 27th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kadaba

ಕಡಬ : ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆವೋರ್ವರು ಮೃತಪಟ್ಟು, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬದ ಹಳೇ ಸ್ಟೇಷನ್ ಕ್ರಾಸ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ಥಾಮಸ್ ಎಂದು ಗುರುತಿಸಲಾಗಿದೆ. ಇವರು ಖಾಸಗಿ ಸಂಸ್ಥೆಯೊಂದರ ಉದ್ಯೋಗಿ ಎಂದು ತಿಳಿದುಬಂದಿದೆ. ಮೃತರು ಕಡಬದಲ್ಲಿ ನಡೆಯುತ್ತಿದ್ದ ಸಂಯುಕ್ತ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಲೆಂದು ತನ್ನ ಪತಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಕಡಬ ಹಳೇ ಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಈ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಮಹಿಳೆ ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಗಾಯಗೊಂಡಿರುವ ಅವರ ಪತಿಯನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

 

1 ಪ್ರತಿಕ್ರಿಯೆ - ಶೀರ್ಷಿಕೆ - ಕೆಎಸ್​​​ಆರ್​ಟಿಸಿ ಬಸ್-ಸ್ಕೂಟರ್ ಮಧ್ಯೆ ಅಪಘಾತ : ಮಹಿಳೆ ಸ್ಥಳದಲ್ಲೇ ಮೃತ್ಯು, ಪತಿ ಗಂಭೀರ

  1. Gangadhara, Sira

    Beautiful news mega channel

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English