ಪೇಜಾವರ ಶ್ರೀ ಗಳ ಕೊನೆಯಾಸೆಯಂತೆ ಬೆಳಗ್ಗಿನ ಜಾವ ಮಠಕ್ಕೆ ಸ್ಥಳಾಂತರ

10:01 PM, Saturday, December 28th, 2019
Share
1 Star2 Stars3 Stars4 Stars5 Stars
(4 rating, 1 votes)
Loading...

Pejawar-seerಉಡುಪಿ : ಡಿಸೆಂಬರ್ 20 ರಂದು ಉಸಿರಾಟದ ತೊಂದರೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳನ್ನು ಆದಿತ್ಯವಾರ ಬೆಳಗ್ಗಿನ ಜಾವ 5 ಕ್ಕೆ ಮಠಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಉಡುಪಿ ಮಠದ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀ ಗಳ ಕೊನೆಯಾಸೆಯಂತೆ ಅವರನ್ನು ಆದಿತ್ಯವಾರ ಬೆಳಗ್ಗಿನ ಜಾವ ಮಠಕ್ಕೆ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಪೇಜಾವರ ಮಠದ ಕಿರಿಯ ಶ್ರೀಗಳು ಹೇಳಿದ್ದಾರೆ.

ಮಠದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು ಅಲ್ಲದೇ ಮಠಕ್ಕೆ ಭಕ್ತರ ಪ್ರವೇಶವನ್ನ ನಿರ್ಬಂಧಿಸ ಲಾಗುವುದು ಎಂದು ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಉಡುಪಿಯಲ್ಲಿದ್ದು ಶ್ರೀಗಳ ಅರೋಗ್ಯ ಸ್ಥಿತಿ ನೋಡಲು ಗಣ್ಯರು ಆಗಮಿಸುತ್ತಿದ್ದಾರೆ.

ಆಸ್ಪತ್ರೆಯ ವೈದ್ಯರ ಮೂಲಗಳ ಪ್ರಕಾರ ಶ್ರೀಗಳ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಕೆಎಂಸಿಯಲ್ಲಿ ದಾಖಲಾಗಿರುವ ಪೇಜಾವರ ಶ್ರೀಗಳ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ.

Pejawar-seerಉಡುಪಿಯಿಂದ 120 ಕಿ.ಮೀ ದೂರದ ಸುಬ್ರಮಣ್ಯದ ಸಮೀಪದ ಹಳ್ಳಿ. ಅಚಾರ್ಯ ಮಧ್ವರು ನಡೆದಾಡಿದ ಪವಿತ್ರ ಸ್ಥಳ. ಹೆಸರು ರಾಮಕುಂಜ. ಬಹಳ ಜನಕ್ಕೆ ಹೆಸರು ಕೇಳಿಯೇ ಗೊತ್ತಿಲ್ಲ. ಅಂಥ ಅಜ್ಞಾತವಾದೊಂದು ಕುಗ್ರಾಮ. ಇಂಥ ಹಳ್ಳಿಯಲ್ಲಿ 1931 ಎಪ್ರಿಲ್ 27 ರಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರು ಜನಿಸಿದರು.

ತಂದೆ ನಾರಾಯಣಾಚಾರ್ಯ, ತಾಯಿ ಕಮಲಮ್ಮ. ಹುಟ್ಟಿದ ಎರಡನೆಯ ಗಂಡುಮಗುವಿಗೆ ‘ವೆಂಕಟರಮಣ’ ಎಂದು ಹೆಸರಿಟ್ಟರು. ಪ್ರಜಾಪತಿ ಸಂವತ್ಸರದ ವೈಶಾಖ ಶುದ್ಧ ದಶಮಿ ಸೋಮವಾರದಂದು ವೆಂಕಟರಮಣನ  ಜನನ.

ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ. ಏಳನೆಯ ವರ್ಷದಲ್ಲೇ ಗಾಯತ್ರಿಯ ಉಪದೇಶ.  ಉಪನಯನಕ್ಕೂ ಮುಂಚೆ, ವೆಂಕಟರಮಣನಿಗೆ ಆರು ವರ್ಷ. ತಂದೆ – ತಾಯಿ ಮಗನನ್ನು ಉಡುಪಿಗೆ ಕರೆ ತಂದರು. ಆಗ ಪೇಜಾವರ ಮಠದ ಪರ್ಯಾಯವೇ ನಡೆದಿತ್ತು. ವೆಂಕಟರಮಣ ಮಠದ ಸ್ವಾಮೀಜಿ ಕೃಷ್ಣ ಪೂಜೆ ಮಾಡುವುದನ್ನು ಆಸಕ್ತಿಯಿಂದ ಗಮನಿಸಿದ.

ತಂದೆ – ತಾಯಿ ವೆಂಕಟರಮಣನನ್ನು ಸ್ವಾಮಿಗಳ ಭೇಟಿಗೆ ಕರೆದುಕೊಂಡು ಹೋದರು. ವೆಂಕಟರಮಣ ಭಕ್ತಿಯಿಂದ ಸ್ವಾಮಿಗಳಿಗೆ ನಮಸ್ಕರಿಸಿದ. ಪುಟ್ಟ ಹುಡುಗನ ಮುಗ್ಧ ಮುಖ, ಅಲ್ಲಿ ತುಂಬಿದ ಭಕ್ತಿ ಭಾವ, ನಡೆಯ ಚುರುಕುತನ ಎಲ್ಲ ಗಮನಿಸಿದ ಸ್ವಾಮಿಗಳಿಗೆ ಏನನ್ನಿಸಿತೋ! ಆಕಸ್ಮಿಕವಾಗಿ ಅವರ ಬಾಯಿಂದ ಹೀಗೊಂದು ಮಾತು ಬಂತು. ‘ನೀನು ನನ್ನಂತೆ ಸ್ವಾಮಿಯಾಗುತ್ತೀಯಾ?’

ವೆಂಕಟರಮಣ ಅವರ ಪ್ರಶ್ನೆಗೆ ಆಗುವೆ ಉತ್ತರಿಸಿದ.  ಮುಂದೆ ಭಗವಂತನ ಪ್ರೇರಣೆಯಂತೆ ಎಲ್ಲವು ನಡೆದಿದೆ. ಅಂದಿನಿಂದ ಇಂದಿನ ವರೆಗೂ ಸುಮಾರು 88 ವರ್ಷಗಳು ಯತಿಗಳಾಗಿಯೇ ಹಿಂದೂ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಶ್ರೀಗಳು ಇಂದು ಇಹಲೋಕದ ಅರಿವಿಲ್ಲದೆ ನಿಷ್ಕ್ರಿಯರಾಗಿ ಮಲಗಿದ್ದಾರೆ.

vishwesha thitha ಶ್ರೀಗಳು ವೆಂಕಟರಮಣನಾಗಿದ್ದಾಗ ಮತ್ತು ಎಂಟನೇ ವಯಸ್ಸಿನಲ್ಲಿ 

Vishwesha thirtha ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ತಮ್ಮ ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ವಿದ್ಯಾಮಾನ್ಯ ತೀರ್ಥ ಅವರೊಂದಿಗೆ

vishwesha thirtha ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ 24 ವಯಸ್ಸಿನಲ್ಲಿ

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English