ಉಡುಪಿ: ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಸ್ವಾಮೀಜಿಯ (88ವರ್ಷ) ಪಾರ್ಥಿವ ಶರೀರವನ್ನು ಉಡುಪಿ ಶ್ರೀಕೃಷ್ಣ ಮಠದಿಂದ ತೆರೆದ ವಾಹನದಲ್ಲಿ ಅಜ್ಜರಕಾಡು ಮೈದಾನಕ್ಕೆ ತರಲಾಯಿತು.
ಅಜ್ಜರಕಾಡು ಮೈದಾನದಲ್ಲಿ ಕುಶಾಲತೋಪು ಹಾರಿಸಿ, ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಸಕಲ ಸರ್ಕಾರಿ ಗೌರವವನ್ನು ಅರ್ಪಿಸಲಾಯಿತು.
ನಂತರ ಸಾರ್ವಜನಿಕರಿಗೆ ಪೇಜಾವರಶ್ರೀಗಳ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಶ್ರೀಗಳ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತ್ರಿವರ್ಣ ಧ್ವಜ ಹೊದಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಶಾಸಕ ರಘಪತಿ ಭಟ್, ಸಚಿವ ಬಸವರಾಜ್ ಬೊಮ್ಮಾಯಿ ,ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಶಾಸಕ ಕೃಷ್ಣ ಪಾಲೇಮಾರ್ ಸೇರಿದಂತೆ ಹಲವು ಗಣ್ಯರು ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಬಳಿಕ ಉಡುಪಿ ಹೆಲಿಪ್ಯಾಡ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಶ್ರೀಗಳ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುತ್ತಿದ್ದು, ನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಂಜೆ 5ಗಂಟೆವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
Click this button or press Ctrl+G to toggle between Kannada and English