ಮಂಗಳೂರು : ಗಲಭೆ ನಡೆಯಬೇಕೆಂಬ ದುರುದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆಯ ಸಂದೇಶ ರವಾನಿಸಿದ ಆರೋಪದ ಮೇಲೆ ನಗರದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ನಿವಾಸಿ ಮೊಯ್ದಿನ್ ಹಫೀಜ್(25) ಬಂಧಿತ ಆರೋಪಿ. ಈತ ಗಲಭೆ ನಡೆಯಬೇಕೆಂಬ ದುರುದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ರವಾನಿಸಿದ್ದ ಎನ್ನಲಾಗ್ತಿದೆ. ಡಿ.19ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧ ಎಂದು ಪೊಲೀಸರು ತಿಳಿಸಿದ್ದರು. ಈ ಹಿಂದೆಯೇ ಪ್ರಚೋದಕ ರೀತಿಯಲ್ಲಿ ಸಂದೇಶ ರವಾನಿಸಿದ್ದ ಓರ್ವನನ್ನು ಬಂಧಿಸಿದ್ದರು.
ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲ್ಲದೆ, ಸಮಾಜದಲ್ಲಿ ಸ್ವಾಸ್ಥ್ಯ ಕದಡಲು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆಯನ್ನು ಸೋಮವಾರ ಪೊಲೀಸರು ರವಾನಿಸಿದ್ದಾರೆ.
Click this button or press Ctrl+G to toggle between Kannada and English