ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ತೊಂದರೆಯಾದರೆ ತಕ್ಕ ಪಾಠ ಕಲಿಸಬೇಕಾಗುತ್ತೆ : ಲಕ್ಷ್ಮಣ ಸವದಿ ಎಚ್ಚರಿಕೆ

2:36 PM, Wednesday, January 1st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

lakshman

ಬೆಂಗಳೂರು : ಪ್ರಸ್ತುತ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರ ಭಾರೀ ಚರ್ಚೆಯಲ್ಲಿದೆ. ಈ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ಗಡಿ ರಕ್ಷಣೆಗೆ ಕೆಲವೇ ದಿನಗಳಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸದಸ್ಯರೊಬ್ಬರನ್ನು ನೇಮಕ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನಾವಶ್ಯಕ ಹೇಳಿಕೆ ಕೊಟ್ಟಿದ್ದಾರೆ. ಗಡಿ ವಿವಾದದ ಕುರಿತು ರಾಜ್ ಠಾಕ್ರೆ ಹೇಳಿಕೆ ಕೊಟ್ಟಿದ್ದರು. ಅದನ್ನು ಈಗ ಉದ್ದವ್ ಠಾಕ್ರೆಗೆ ನೆನಪು ಮಾಡಿಕೊಡುತ್ತಿದ್ದಾರೆ. ಅನಾವಶ್ಯಕವಾಗಿ ಗೊಂದಲ ಸೃಷ್ಟಿಸಿ ತೊಂದರೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆಯ ಕಾರ್ಯಕರ್ತರು ಪ್ರಚೋದನೆ ಹೇಳಿಕೆ ಕೊಟ್ಟಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಗಡಿ ಭಾಗದ ಕರ್ನಾಟಕದವರ ಪರವಾಗಿ ರಾಜ್ಯ ಸರ್ಕಾರ ಗಟ್ಡಿಯಾಗಿ ನಿಲ್ಲಲಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಏನಾದರೂ ತೊಂದರೆ ಆದರೆ ನಾವಂತೂ ಅದನ್ನು ಸಹಿಸುವುದಿಲ್ಲ. ಅದಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತೆ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆಗೆ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English