- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದೆಹಲಿ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ : ರಕ್ಷಣಾ ಕಾರ್ಯಾಚರಣೆ ವೇಳೆ ಕುಸಿದ ಕಟ್ಟಡ

dehli [1]

ನವದೆಹಲಿ : ಬೆಂಕಿ ಅವಘಡ ಸಂಭವಿಸಿದ್ದ ಪೀರಗರ್ಹಿಯ ಫ್ಯಾಕ್ಟರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮೂಲಗಳ ಪ್ರಕಾರ, ಪೀರಗರ್ಹಿಯ ಫ್ಯಾಕ್ಟರಿಯೊಂದಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿದ್ದವು.

ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಸ್ಥಳದಲ್ಲಿ 35 ಅಗ್ನಿಶಾಮಕ ವಾಹನಗಳಿದ್ದು, ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ದೆಹಲಿ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘಟನೆ ಕುರಿತು ಟ್ವೀಟ್ ಮಾಡಿದ್ದಾರೆ. ಬಹಳ ದುರಂತದ ಘಟನೆ ನಡೆದಿದೆ. ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಅಗ್ನಿಶಾಮಕ ಸಿಬ್ಬಂದಿ ಬಹಳ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡಗಳಡಿ ಸಿಲುಕಿರುವವರು ಸುರಕ್ಷಿತವಾಗಿ ಹೊರಬರಲೆಂದು ಪ್ರಾರ್ಥಿಸುತ್ತೇನೆ,” ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.