ಎನ್‌ಆರ್‌ಸಿ, ಸಿಎಎ ಕಾಯ್ದೆ ವಿರುದ್ಧ ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

9:37 AM, Friday, January 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

CPIM

ಮಡಿಕೇರಿ : ಕೇಂದ್ರ ಸರ್ಕಾರದ ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಯನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಡಾ.ಇ.ರ.ದುರ್ಗಾಪ್ರಸಾದ್, ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮೂಲ ಆಶಯಗಳಿಗೆ ವಿರೋಧವಾಗಿದ್ದು, ದೇಶದ ಐಕ್ಯತೆಗೆ ಧಕ್ಕೆ ತಂದರುವಂತಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಅನುಸರಿಸುತ್ತಿರುವ ವೈಫಲ್ಯದ ಆರ್ಥಿಕ ಧೋರಣೆಗಳಿಂದಾಗಿ ದೇಶದಲ್ಲಿ ಜನ ಸಾಮಾನ್ಯರ ಸ್ಥಿತಿಗತಿ ಹದಗೆಟ್ಟಿದೆ. ಮತಾಧಾರಿತ ವಿವೇಚನೆಯನ್ನು ಪ್ರದರ್ಶಿಸುತ್ತಿರುವ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಂಡು ಅವರನ್ನು ಗುಲಾಮಗಿರಿಗೆ ದೂಡಲು ಮುಂದಾಗಿದೆ ಎಂದು ಟೀಕಿಸಿದರು. ಪೌರತ್ವ ತಿದ್ದುಪಡಿ ಕಾಯಿದೆಯನ್ನು ಹಿಂಪಡೆಯಬೇಕು, ಬಂಡವಾಳಶಾಹಿಗಳ ಪರವಾದ ಆರ್ಥಿಕ ಧೋರಣೆಗಳನ್ನು ನಿಲ್ಲಿಸಬೇಕು, ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು ಮತ್ತು ಕಾರ್ಮಿಕರ, ರೈತರ ಬೇಡಿಕೆಗಳನ್ನು ಅಂಗೀಕರಿಸಬೇಕೆಂದು ದುರ್ಗಾಪ್ರಸಾದ್ ಒತ್ತಾಯಿಸಿದರು.

ನಂತರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಮನವಿ ಸ್ವೀಕರಿಸಿದರು.
ಸಿಪಿಐ(ಎಂ) ಸದಸ್ಯರಾದ ಎ.ಸಿ.ಸಾಬು, ಎನ್.ಡಿ.ಕುಟ್ಟಪ್ಪ, ಮಹದೇವ್, ಪಿ.ಆರ್.ಭರತ್, ಸಿಪಿಐ ಪ್ರಧಾನ ಕಾರ್ಯದರ್ಶಿ ಕೆ.ವಿ.ಸುನೀಲ್, ಸದಸ್ಯ ಹೆಚ್.ಎಂ.ಸೋಮಪ್ಪ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English