ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಸರಕಾರದ ಆದೇಶಕ್ಕೆ ವಿರೋದ ವ್ಯಕ್ತಪಡಿಸಿದ ಎಸ್ಎಫ್ಐ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲು

3:04 PM, Friday, November 2nd, 2012
Share
1 Star2 Stars3 Stars4 Stars5 Stars
(5 rating, 1 votes)
Loading...

Kannada Rajyithsavaಮಂಗಳೂರು : ಮಂಗಳೂರು ಗುರುವಾರ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚವ ಆದೇಶಕ್ಕೆ ವಿರೋದ ವ್ಯಕ್ತಪಡಿಸಿ, ಗಲಭೆಯನ್ನೆಬ್ಬಿಸಿದ ಎಸ್ಎಫ್ಐ ಕಾರ್ಯಕರ್ತರನ್ನು ಬಂದಿಸಿ, ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ ಎಂದು ರಾಜ್ಯದ 12,740 ಕನ್ನಡ ಶಾಲೆಗಳನ್ನು ಮುಚ್ಚಲು ಶಿಫಾರಸ್ಸು ಮಾಡಿದ್ದು, ಅದರಂತೆ ರಾಜ್ಯ ಸರಕಾರವು ಕೂಡ ಆ ಶಾಲೆಗಳನ್ನು ಮುಚ್ಚುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ರಾಜ್ಯೋತ್ಸವದ ಸಂದೇಶ ನೀಡಲು ಪ್ರಾರಂಭಿಸುತ್ತಿದ್ದಂತೆ ಎಸ್ಎಫ್ಐ ಕಾರ್ಯಕರ್ತರು ಸಚಿವರ ಭಾಷಣಕ್ಕೆ ಅಡ್ಡಿ ಪಡಿಸುವ ಯತ್ನ ನಡೆಸಿದ್ದರು.

ಆದರೆ ಮೈದಾನ ಪ್ರವೇಶಿಸಿದ ಕಾರ್ಯಕರ್ತರನ್ನು ತಡೆದು ಬಂದಿಸಿದ ಪೊಲೀಸರು ಒಟ್ಟು ೪೬ ಮಂದಿಯ ಮೇಲೆ ಎಫ್ ಐಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಪ್ರತಿಭಟನೆಯ ಕುರಿತು ಮಾತನಾಡಿದ ಡಿವೈಎಫ್ ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ, ಕನ್ನಡ ಶಾಲೆಗಳನ್ನು ಮುಚ್ಚುವುದನ್ನು ಪ್ರತಿಭಟಿಸಿದ ಪ್ರತಿಭಟನಾಕಾರರನ್ನು ಬಂಧಿಸುರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಚೈಲ್ಡ್ ವೆಲ್ ಪೇರ್ ಕಮಿಟಿಯ ಆಶಾ ನಾಯಕ್ ರವರು ಘಟನೆಗೆ ಸಂಬಂದಿಸಿದಂತೆ ಪ್ರಜಾಪ್ರಭುತ್ವ ರಾಜ್ಯದಲ್ಲಿ ಹಕ್ಕುಗಳ ಉಲ್ಲಂಘನೆಯಾದರೆ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಪ್ರತಿಭಟನಾಕಾರರು ಕಾರ್ಯಕ್ರಮವನ್ನು ಹಾಳು ಮಾಡುವ ಉದ್ದೇಶ ಹೊಂದಿರಲ್ಲಿಲ್ಲ ಎಂದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English