ಸುರತ್ಕಲ್ : ಸಂಘ ಸಂಸ್ಥೆ ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಮಾಜಕ್ಕೂ ಕೂಡಾ ಒಳ್ಳೆಯದಾಗುತ್ತದೆ. ಸಮಾಜ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕೇವಲ ತಮ್ಮ ಸಂಘ ಮಾತ್ರವಲ್ಲದೇ ಇತರ ಸಮಾಜಕ್ಕೂ ಸ್ಪಂದಿಸುವ ಕೆಲಸ ಮಾಡಬೇಕು. ನಾಯಕತ್ವವನ್ನು ಸಮಾಜದ ಒಳಿತಿಗೆ ಬಳಸಿಕೊಳ್ಳಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನುಡಿದರು.
ಅವರು ಸುರತ್ಕಲ್ ಬಂಟರ ಸಂಘ ಮತ್ತು ಬಂಟರ ಯಾನೆ ನಾವಡರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಸಹಯೋಗದೊಂದಿಗೆ ಜರುಗಿದ ಬಂಟರ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯ ಅತಿಥಿ ಮುಖ್ಯ ಅತಿಥಿ ಮಾತೃ ಭೂಮಿ ಕೋಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಮುಂಡ್ಕೂರು ಅವರು ಮಾತನಾಡಿ ಬಂಟರ ಸಂಘದಲ್ಲಿ ಯುವ ಜನತೆಯ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಸಮಾಜದ ಒಳಿತಿಗಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಸಂಘ ಸಂಸ್ಥೆ ಮಾಡಬೇಕು.
ಬಂಟ ಸಮುದಾಯವು ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ತಾನು ಮಾತ್ರವಲ್ಲದೇ ಇತರ ಸಂಘವನ್ನು ಸಮಾಜದಲ್ಲಿ ಮುಂದೆ ತರುವ ಕೆಲಸವನ್ನು ಮಾಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಎಸ್ ಪೂಂಜ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಬಂಟರ ಯಾನೆ ನಾವಡರ ಮಾತೃಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ, ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಾಜೀ ಕೋಶಾಧಿಕಾರಿ ಬಾಲಕೃಷ್ಣ ರೈ ಕೊಲ್ಲಾಡಿ, ಸುರತ್ಕಲ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಕೋಶಾಕಾರಿ ರತ್ನಾಕರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸುರತ್ಕಲ್ ಬಂಟರ ಮಹಿಳಾ ವೇದಿಕೆ ಅಧ್ಯಕ್ಷೆ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ ಶೆಟ್ಟಿ, ವೇದಾವತಿ ಶೆಟ್ಟಿ ಮತ್ತಿತ್ತರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ವಂದಿಸಿದರು. ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
Click this button or press Ctrl+G to toggle between Kannada and English