ನವದೆಹಲಿ : ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಬೇಕೇ ಬೇಡವೇ ಎನ್ನುವ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಜನವರಿ 13ನೇ ತಾರೀಕಿನಿಂದ ಅಂತಿಮ ವಿಚಾರಣೆ ಆರಂಭವಾಗಲಿದೆ. ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ವಿಚಾರಣೆ ನಡೆಸಲಿದೆ. ಇದೇ ವೇಳೆ ಮುಸ್ಲಿಂ ಮತ್ತು ಪಾರ್ಸಿ ಸುಮಾಯದ ಮಹಿಳೆಯರ ತಾರತಮ್ಯದ ಬಗ್ಗೆಯೂ ವಿಚಾರಣೆ ಮಾಡಲಿದೆ.
ಈ ಹಿಂದೆ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಮಾನ ಪ್ರಕಟಿಸಿತ್ತು. ಈ ಪ್ರಕರಣವನ್ನು ಒಂಬತ್ತು ಸದಸ್ಯರ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಹಿಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾ. ರೋಹಿಂಟನ್ ನಾರಿಮನ್, ನ್ಯಾ.ಡಿ.ವೈ.ಚಂದ್ರಚೂಡ್, ಮತ್ತು ನ್ಯಾ.ಇಂದು ಮಲ್ಹೋತ್ರಾರ ನ್ಯಾಯಪೀಠ ಈ ಆದೇಶ ಹೊರಡಿಸಿತ್ತು.
ಕಳೆದ ವರ್ಷ ಸೆಪ್ಟೆಂಬರ್ 28ರಂದು ಶಬರಿಮಲೆ ಅಯ್ಯಪ್ಪನ ಸನ್ನಿದಿಗೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಬಳಿಕ ಈ ತೀರ್ಪು ವಿರೋಧಿಸಿ ಇಲ್ಲಿಯವರೆಗೂ 65 ಅರ್ಜಿಗಳು ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳನ್ನೂ ವಿಚಾರಣೆಗೆ ಒಳಪಡಿಸಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಒಪ್ಪಿಗೆ ಸೂಚಿಸಿತ್ತು.
ನಂತರ ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿಗೆ ನಾವು ಬದ್ಧವಾಗಿದ್ದೇವೆ ಎಂದು ಅಯ್ಯಪ್ಪ ದೇವಾಲಯ ಆಡಳಿತ ಮಂಡಳಿಯೂ ತಿಳಿಸಿದೆ. ಜತೆಗೆ ಕೋರ್ಟ್ ಆದೇಶದಂತೆಯೇ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುತ್ತೇವೆ ಎಂದು ಆಡಳಿತ ಮಂಡಳಿ ತಿಳಿಸಿತ್ತು. ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಹಿಂದಿನ ಮುಖ್ಯ ನ್ಯಾಯಮೂರ್ತಿ ಗೋಗಾಯ್ ನೇತೃತ್ವದ ನ್ಯಾಯಪೀಠ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವುದಕ್ಕು; ಧಾರ್ಮಿಕ ಆಚರಣೆಗೆ ಯಾವುದೇ ಸಂಬಂಧವಿಲ್ಲ ಎಂದು ಚಾಟಿ ಬೀಸಿತ್ತು.
ತನ್ನ ಹಿಂದಿನ ತೀರ್ಪನ್ನು ಮತ್ತೆ ಪರಿಶೀಲನೆ ನಡೆಸುವ ಸಲುವಾಗಿ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದ್ದರೂ, ದೇವಸ್ಥಾನದ ಆಡಳಿತ ಮಂಡಳಿ ಮಹಿಳೆಯರಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಮುಂದಿನ ತೀರ್ಪು ಬರುವವರೆಗೂ ಸುಪ್ರೀಂಕೋರ್ಟ್‌ನ ಹಿಂದಿನ ತೀರ್ಪು ಚಾಲ್ತಿಯಲ್ಲಿ ಇರುತ್ತದೆ.
Click this button or press Ctrl+G to toggle between Kannada and English