ಉಕ್ರೇನ್‌ ವಿಮಾನ ಇರಾನ್‌ನಲ್ಲಿ ಪತನ : ಬೋಯಿಂಗ್‌ ವಿಮಾನದಲ್ಲಿದ್ದ 170 ಮಂದಿ ದುರ್ಮರಣ

12:07 PM, Wednesday, January 8th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

vimana

ಟೆಹ್ರಾನ್ ‌: ಉಕ್ರೇನ್‌ನಿಂದ ಹೊರಟಿದ್ದ ವಿಮಾನ ಇರಾನ್‌ನಲ್ಲಿ ಪತನಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲ 170 ಮಂದಿ ದುರ್ಮರಣಕ್ಕೀಡಾಗಿದ್ದಾರೆಂದು ಇರಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ ರಾಜಧಾನಿ ಟೆಹ್ರಾನ್‌ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಉಕ್ರೇನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ನ ಬೋಯಿಂಗ್ 737 ವಿಮಾನ ತಾಂತ್ರಿಕ ಸಮಸ್ಯೆಗಳಿಂದಾಗಿ ಬುಧವಾರ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 180 ಮಂದಿ ಇದ್ದರು ಎಂದು ಇರಾನ್‌ ಸರಕಾರಿ ಮಾಧ್ಯಮ ವರದಿ ಮಾಡಿತ್ತು.

ತಾಂತ್ರಿಕ ಸಮಸ್ಯೆಗಳಿಂದ ಅಪಘಾತ ಉಂಟಾಗಿದೆ ಎಂದು ಶಂಕಿಸಲಾಗಿದೆ. ಟೆಹ್ರಾನ್‌ನ ನೈರುತ್ಯ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ತನಿಖಾ ತಂಡ ಧಾವಿಸಿದೆ ಎಂದು ನಾಗರಿಕ ವಿಮಾನಯಾನ ವಕ್ತಾರ ರೆಜಾ ಜಾಫರ್ಜಾಡೆ ತಿಳಿಸಿದ್ದರು.

ಉಕ್ರೇನ್ ಅಂತಾರಾಷ್ಟ್ರೀಯ ಏರ್‌ಲೈನ್ಸ್‌ನ ಉಕ್ರೇನಿಯನ್ 737-800 ವಿಮಾನ ಬುಧವಾರ ಬೆಳಿಗ್ಗೆ ಹೊರಟಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ರಾಡಾರ್‌ ಮಾಹಿತಿ ನೀಡುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ವೆಬ್‌ಸೈಟ್‌ವೊಂದು ತಿಳಿಸಿದೆ.

ಖಾಸಿಮ್‌ ಸುಲೈಮಾನಿ ಹತ್ಯೆಗೆ ಪ್ರತೀಕಾರವಾಗಿ ಅಮೆರಿಕದ ಎರಡು ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಮಿಸೈಲ್‌ ದಾಳಿ ನಡೆಸಿದ ಕೆಲವೇ ಗಂಟೆಗಳ ಹೊತ್ತಿನಲ್ಲಿ ಉಕ್ರೇನ್‌ ವಿಮಾನ ಇರಾನ್‌ ರಾಜಧಾನಿ ಟೆಹ್ರಾನ್‌ ವಿಮಾನ ನಿಲ್ದಾಣದ ಬಳಿ ಪತನಗೊಂಡಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English