ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುವವರಿಗೆ ಕಠಿಣ ಕ್ರಮವಾಗಬೇಕು : ಸಂಸದ ಪ್ರತಾಪ್ ಸಿಂಹ

9:39 AM, Thursday, January 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

pratap-simha

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಚಾರಿತ್ರಿಕ ಕ್ರಮ ಕೈಗೊಂಡಿದೆ. ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ತೊಂದರೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕಠಿಣ ಕಾನೂನು ಜಾರಿಯಾಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ 370 ನೇ ವಿಧಿ ಹಾಗೂ ತ್ರಿವಳಿ ತಲಾಕ್ ರದ್ದು ಪಡಿಸಿದೆ. ಅಯೋಧ್ಯೆ ತೀರ್ಪು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದೆ. ಉತ್ತರ ಭಾರತದ ಗಡಿ ದೇಶಗಳಲ್ಲಿ ನರಕಯಾತನೆ ಅನುಭವಿಸುತ್ತಿರುವ ಮಂದಿಗೆ ಪೌರತ್ವ ನೀಡಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಪೌರತ್ವ ಕಾಯ್ದೆಯ ಸಂಪೂರ್ಣ ಮಾಹಿತಿ ಪಡೆದು ಶಾಂತಿ ಕಾಪಾಡುವಂತೆ ಸಂಸದರು ಮನವಿ ಮಾಡಿದರು. ಪ್ರಕೃತಿ ವಿಕೋಪ ಸಂಬಂದಿಸಿದಂತೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಹಣ ಬಿಡುಗಡೆ ಮಾಡಿದೆ ಎಂದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English