ತಂಬಾಕು ನಿಯಂತ್ರಣ : ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ; ನಾಮಫಲಕ ಅಳವಡಿಕೆ ಕಡ್ಡಾಯ

10:10 AM, Thursday, January 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

thambaku

ಮಡಿಕೇರಿ : ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಅವರು ಜಿಲ್ಲೆಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸಂಸ್ಥೆಗಳಲ್ಲಿ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ತಂಬಾಕು ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಜಾಗೃತಿ ಮೂಡಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮದ ಅಧಿಕಾರಿ ಡಾ.ಎಂ.ಶೀವಕುಮಾರ್ ಅವರು ಮಾತನಾಡಿ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ನಾಮಫಲಕ ಅಳವಡಿಸುವುದು ಸಂಬಂಧಿಸಿದಂತೆ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಕೋಟ್ಪಾ ಉನ್ನತ ಅನುಷ್ಠಾನ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಸುಮಾರು 26ಕಡೆಗಳಲ್ಲಿ ತಪಾಸಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

thambaku

ಚಿತ್ರ ಪ್ರದರ್ಶನ, ಕಲಾಸ್ಪರ್ಧೆ ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಯಂತ್ರಣ ನಾಮಫಲಕ ಅಳವಡಿಸಲಾಗಿದೆ. ಹಾಗೆಯೇ ಪ್ರವಾಸಿ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ತಂಬಾಕು ನಿಯಂತ್ರಣ ಘಟಕದಿಂದ ತಂಬಾಕು ನಿಯಂತ್ರಣದ ಮಾಹಿತಿ, ಶಿಕ್ಷಣದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಪೊಲೀಸ್ ಇನ್ಸ್‌ಪೆಕ್ಟರ್ ಜಯರಾಮ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯಡಿ 746 ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಮಾರು ರೂ. ೬೫ ಸಾವಿರ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಸೂಲಿ ಆದ ದಂಡವನ್ನು ನಿಗದಿತ ಖಾತೆಗೆ ಜಮೆ ಮಾಡಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಸಲಹೆ ಮಾಡಿದರು. ಸಮವಸ್ತ್ರದಲ್ಲಿರುವ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಂಡ ವಸೂಲಿ ಮಾಡಬಹುದು, ಜೊತೆಗೆ ಕಚೇರಿ ಮುಖ್ಯಸ್ಥರು ಕೂಡ ವಸೂಲಿ ಮಾಡಿ ನಿಗದಿತ ಖಾತೆಗೆ ದಂಡ ಶುಲ್ಕವನ್ನು ಜಮೆ ಮಾಡಬಹುದು ಎಂದು ಎಂ.ಶಿವಕುಮಾರ್ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕಾರ್ಯಕ್ರಮ ಅಧಿಕಾರಿಗಳಾದ ಗೋಪಿನಾಥ್, ಡಾ.ಆನಂದ್, ಡಾ.ರಾಮಚಂದ್ರ ಕಾಮತ್ ಇತರರು ಹಾಜರಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English