ದೆಹಲಿಯಲ್ಲಿ ಮತ್ತೊಂದು ಅಗ್ನಿ ಅನಾಹುತ : ಓರ್ವ ವ್ಯಕ್ತಿ ಸಾವು, ಹಲವರು ಗಂಭೀರ

12:43 PM, Thursday, January 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

dehali

ನವದೆಹಲಿ : ಪೂರ್ವ ದೆಹಲಿಯ ಪತ್ ಪರ್ ಗಂಜ್ ಕೈಗಾರಿಕ ಪ್ರದೇಶದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ಮಾಧ್ಯಮದ ವರದಿ ತಿಳಿಸಿದೆ.

ಸ್ಥಳಕ್ಕೆ 32 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು , ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಗ್ ಪ್ರೆಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಾರದ ಹಿಂದೆ ದೆಹಲಿಯ ಪಿರಾಗ್ರಹಿ ಇನ್ ವರ್ಟರ್ ಬ್ಯಾಟರಿ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಕಾಣಿಸಿಕೊಂಡು ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಓರ್ವ ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿ, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಆ ಘಟನೆಯಲ್ಲಿ ಸ್ಪೋಟ ಸಂಭವಿಸಿ ಕಟ್ಟಡದ ಭಾಗವೊಂದು ಭಾಗಶಃ ಕುಸಿದಿತ್ತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English